ADVERTISEMENT

ಅಪೌಷ್ಠಿಕ ಮಕ್ಕಳ ಪತ್ತೆಗೆ ವಿಶೇಷ ತಪಾಸಣಾ ಶಿಬಿರ

​ಪ್ರಜಾವಾಣಿ ವಾರ್ತೆ
Published 15 ಫೆಬ್ರುವರಿ 2024, 16:25 IST
Last Updated 15 ಫೆಬ್ರುವರಿ 2024, 16:25 IST
ಸಂಡೂರು ತಾಲ್ಲೂಕಿನ ಬಂಡ್ರಿ ಗ್ರಾಮದಲ್ಲಿ ಬುಧವಾರ ನಡೆದ ಅಪೌಷ್ಠಿಕ ಮಕ್ಕಳ ತಪಾಸಣಾ ಶಿಬಿರಕ್ಕೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ವೈ ರಮೇಶ್ ಬಾಬು ಚಾಲನೆ ನೀಡಿದರು
ಸಂಡೂರು ತಾಲ್ಲೂಕಿನ ಬಂಡ್ರಿ ಗ್ರಾಮದಲ್ಲಿ ಬುಧವಾರ ನಡೆದ ಅಪೌಷ್ಠಿಕ ಮಕ್ಕಳ ತಪಾಸಣಾ ಶಿಬಿರಕ್ಕೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ವೈ ರಮೇಶ್ ಬಾಬು ಚಾಲನೆ ನೀಡಿದರು   

ಸಂಡೂರು : ತಾಲೂಕಿನ ಬಂಡ್ರಿ ವ್ಯಾಪ್ತಿಯ 45 ಅಂಗನವಾಡಿ ಕೇಂದ್ರಗಳ ಅಪೌಷ್ಟಿಕ ಮಕ್ಕಳನ್ನು ಪತ್ತೆ ಹಚ್ಚುವ ವಿಶೇಷ ತಪಾಸಣಾ ಶಿಬಿರವನ್ನು ಬುಧವಾರ ಹಮ್ಮಿಕೊಳ್ಳಲಾಗಿತ್ತು.

ಶಿಬಿರಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ವೈ ರಮೇಶ್ ಬಾಬು ಚಾಲನೆ ನೀಡಿ ಮಾತನಾಡಿದರು.

ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳನ್ನು ಗುರ್ತಿಸಿ ಚಿಕಿತ್ಸೆಗೆ ಒಳಪಡಿಸಲು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ನಿರ್ದೇಶನ ನೀಡಿದ್ದು ಅದರಂತೆ ಸಂಡೂರು ತಾಲೂಕಿನ ಬಂಡ್ರಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ತಪಾಸಣಾ ಕಾರ್ಯ ಕೈಗೊಳ್ಳಲಾಗಿದೆ. ಈ ತಪಾಸಣೆಯು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳು ಜಂಟಿಯಾಗಿ ತಪಾಸಣಾ ಕಾರ್ಯ ಕೈಗೊಳ್ಳಲಾಗಿದೆ.

ADVERTISEMENT

ಬಂಡ್ರಿ ವ್ಯಾಪ್ತಿಯ 45 ಅಂಗನವಾಡಿ ಕೇಂದ್ರ ವ್ಯಾಪ್ತಿಯ ಹುಟ್ಟಿನಿಂದ 06 ವರ್ಷದೊಳಗಿನ 3600 ಮಕ್ಕಳ ತಪಾಸಣೆ ಕೈಗೊಳ್ಳಲು ಕಾರ್ಯಯೋಜನೆ ಹಾಕಿಕೊಳ್ಳಲಾಗಿದೆ ಎಂದರು.

ವಯಸ್ಸಿಗೆ ತಕ್ಕ ತೂಕ, ಎತ್ತರಕ್ಕೆ ತಕ್ಕ ತೂಕ, ತೋಳಿನ ಸುತ್ತಳತೆ ಮೂಲಕ ಮಕ್ಕಳ ಅಪೌಷ್ಟಿಕತೆಯನ್ನು ಗುರ್ತಿಸಲಾಗುತ್ತಿದ್ದು 9 ಆರ್‌ಬಿಎಸ್‌ಕೆ ಮೂರು ಸಂಚಾರಿ ಆರೋಗ್ಯ ಘಟಕಗಳು 45 ಅಂಗನವಾಡಿ ಕಾರ್ಯಕರ್ತೆಯರು, 36 ಆಶಾ ಕಾರ್ಯಕರ್ತೆಯರು ಜಂಟಿಯಾಗಿ ತಪಾಸಣೆಗೆ ನಿಯೋಜಿಸಲಾಗಿದೆ ಎಂದು ತಿಳಿಸಿದರು.

ಸಮೀಕ್ಷೆಯ ನೇತ್ರತ್ವವನ್ನು ಡಾ.ವೈ ರಮೇಶ್ ಬಾಬು,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಮತ್ತು ವಿಜಯಕುಮಾರ್, ಉಪನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರು ವಹಿಸಿದ್ದರು.

ಡಾ. ಅನೀಲ್ ಕುಮಾರ್, ಜಿಲ್ಲಾ ಆರ್‌ಸಿಹೆಚ್‌ ಅಧಿಕಾರಿಗಳು, ನಿರೂಪಣಾಧಿಕಾರಿ,ರಾಮಕೃಷ್ಣ ,ತಾಲೂಕಾ ಆರೋಗ್ಯಾಧಿಕಾರಿ ಡಾ ಭರತ್‌, ಜಿಲ್ಲೆಯ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳಾದ ನಾಗರಾಜ, ಎಳೆನಾಗಪ್ಪ, ಮೋಹನಕುಮಾರಿ, ಪ್ರದೀಪ್‌, ಡಾ ಸುನೀತಾ, ಡಾ ಅಕ್ಷಯ್‌ ಶಿವಪೂರೆ, ಡಾ ಚಂದ್ರಪ್ಪ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ, ಈಶ್ವರ ದಾಸಪ್ಪನವರ, ಗಿರೀಶ್‌ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.