ಬಳ್ಳಾರಿ: ‘ಪ್ರಜ್ವಲ್ ರೇವಣ್ಣ ಪ್ರಕರಣದಿಂದ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಗೆ ದಕ್ಕೆಯಾಗಿದೆ. ಪ್ರಕರಣ ತನಿಖಾ ಹಂತದಲ್ಲಿ ಇರುವಾಗಲೇ ಬಿಜೆಪಿಯು ಅನಗತ್ಯ ರಾಜಕೀಯ ಮಾಡುತ್ತಿದೆ. ಅದಕ್ಕೆ ಬಿಜೆಪಿಯವರು ಕಾಂಗ್ರೆಸ್ ವಿರುದ್ಧ ಆರೋಪ ಮಾಡುತ್ತಿದ್ದಾರೆ’ ಎಂದು ಸಚಿವ ಬಿ. ನಾಗೇಂದ್ರ ತಿಳಿಸಿದರು.
‘ಕೃತ್ಯವನ್ನು ಬಿಜೆಪಿ ನಾಯಕರು ಸಮರ್ಥಿಸಿಕೊಳ್ಳುತ್ತಿದ್ದಾರೆ. ಈ ಘಟನೆಯಲ್ಲಿ ಯಾವ ಷಡ್ಯಂತ್ರವೂ ಇಲ್ಲ. ಪಾಪ ಮಾಡಿದವರು ಅನುಭವಿಸುತ್ತಾರೆ’ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.
ಪೆನ್‌ಡ್ರೈವ್ ಹಿಂದೆ ಮಹಾನಾಯಕರೊಬ್ಬರು ಇದ್ದಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ‘ಮಹಾನ್ ನಾಯಕ ಎಂದರೆ ಯಾರು. ನಾವೂ ಕಾತರದಿಂದ ಕಾಯುತ್ತಿದ್ದೇವೆ. ಬಿಜೆಪಿಯ ಮಹಾನಾಯಕರೋ, ಜೆಡಿಎಸ್‌ನ ಮಹಾನಾಯಕರೋ? ಇದರಲ್ಲಿ ಡಿ.ಕೆ ಶಿವಕುಮಾರ್ ಅವರ ಪಾತ್ರವೇನೂ ಇಲ್ಲ‘ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.