ADVERTISEMENT

ಬಳ್ಳಾರಿ | ಜಿಲ್ಲಾ ಆಸ್ಪತ್ರೆಯಲ್ಲಿ ಮಗು ಹೆತ್ತ ಸಿಇಒ

​ಪ್ರಜಾವಾಣಿ ವಾರ್ತೆ
Published 17 ಮಾರ್ಚ್ 2022, 22:02 IST
Last Updated 17 ಮಾರ್ಚ್ 2022, 22:02 IST
ಬಳ್ಳಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಬುಧವಾರ ರಾತ್ರಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಐಎಎಸ್‌ ಅಧಿಕಾರಿ ಕೆ.ಆರ್‌. ನಂದಿನಿ ಮತ್ತು ಮಗುವಿನ ಜತೆ  ವೈದ್ಯರ ತಂಡ
ಬಳ್ಳಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಬುಧವಾರ ರಾತ್ರಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಐಎಎಸ್‌ ಅಧಿಕಾರಿ ಕೆ.ಆರ್‌. ನಂದಿನಿ ಮತ್ತು ಮಗುವಿನ ಜತೆ  ವೈದ್ಯರ ತಂಡ   

ಬಳ್ಳಾರಿ: ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆಗಿದ್ದ ಐಎಎಸ್‌ ಅಧಿಕಾರಿ ಕೆ.ಆರ್‌.ನಂದಿನಿ ಇಲ್ಲಿನ ಜಿಲ್ಲಾ ಆಸ್ಪತ್ರೆಯಲ್ಲಿ ಬುಧವಾರ ರಾತ್ರಿ ಹೆಣ್ಣುಮಗುವಿಗೆ ಜನ್ಮ ನೀಡಿದರು.

ನಂದಿನಿ ಅವರಿಗೆ ಸಹಜ ಹೆರಿಗೆ ಆಗಿದ್ದು, ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ. ಪ್ರಸೂತಿ ತಜ್ಞ ಡಾ. ವೀರೇಂದ್ರ ಕುಮಾರ್‌ ನೇತೃತ್ವದ ಹಿರಿಯ ಮತ್ತು ಕಿರಿಯ ವೈದ್ಯರ ದೊಡ್ಡ ತಂಡವೇ ಐಎಎಸ್‌ ಅಧಿಕಾರಿಯ ಆರೈಕೆ ಮಾಡಿದೆ.

ಬಳ್ಳಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸಿಕೊಂಡ ಮೊದಲ ಐಎಎಸ್‌ ಅಧಿಕಾರಿ ನಂದಿನಿ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.