ADVERTISEMENT

ಐಟಿಐ ಪರೀಕ್ಷೆ ರದ್ದುಪಡಿಸಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 16 ಫೆಬ್ರುವರಿ 2021, 11:17 IST
Last Updated 16 ಫೆಬ್ರುವರಿ 2021, 11:17 IST
ಐಟಿಐ ಪರೀಕ್ಷೆ ರದ್ದುಗೊಳಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಮಂಗಳವಾರ ಎಐಡಿವೈಒ ನೇತೃತ್ವದಲ್ಲಿ ಹೊಸಪೇಟೆ ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು
ಐಟಿಐ ಪರೀಕ್ಷೆ ರದ್ದುಗೊಳಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಮಂಗಳವಾರ ಎಐಡಿವೈಒ ನೇತೃತ್ವದಲ್ಲಿ ಹೊಸಪೇಟೆ ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು   

ವಿಜಯನಗರ (ಹೊಸಪೇಟೆ): ತರಬೇತಿ ಪಡೆಯದ ವಿದ್ಯಾರ್ಥಿಗಳಿಗೆ ಐಟಿಐ ಪರೀಕ್ಷೆ ನಿಗದಿಪಡಿಸಿರುವುದು ಸರಿಯಲ್ಲ. ಕೂಡಲೇ ಪರೀಕ್ಷೆ ರದ್ದುಗೊಳಿಸುವಂತೆ ಆಗ್ರಹಿಸಿ ಆಲ್‌ ಇಂಡಿಯಾ ಡೆಮೊಕ್ರಟಿಕ್‌ ಯುತ್‌ ಆರ್ಗನೈಜೇಶನ್‌ (ಎಐಡಿವೈಒ) ಕಾರ್ಯಕರ್ತರು ಮಂಗಳವಾರ ನಗರದ ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಬಳಿಕ ತಹಶೀಲ್ದಾರ್‌ ಎಚ್‌. ವಿಶ್ವನಾಥ್‌ ಮೂಲಕ ಕೈಗಾರಿಕಾ ತರಬೇತಿ ಹಾಗೂ ಉದ್ಯೋಗ ಇಲಾಖೆಯ ಆಯುಕ್ತರ ಹೆಸರಿಗೆ ಬರೆದ ಮನವಿ ಪತ್ರ ಸಲ್ಲಿಸಿದರು.

ಕೋವಿಡ್‌ ಲಾಕ್‌ಡೌನ್‌ನಿಂದ ಐಟಿಐ ವಿದ್ಯಾರ್ಥಿಗಳಿಗೆ ಹತ್ತು ತಿಂಗಳಿಂದ ತರಬೇತಿ ಆಗಿಲ್ಲ. ಮೊದಲ ವರ್ಷದ ಪರೀಕ್ಷೆಯಿಂದ ವಿನಾಯಿತಿ ನೀಡಿ ನವದೆಹಲಿಯ ಡಿಜಿಟಿ ಆದೇಶ ಹೊರಡಿಸಿದ್ದಾರೆ. ಹೀಗಿದ್ದರೂ ಕೈಗಾರಿಕಾ ತರಬೇತಿ ಹಾಗೂ ಉದ್ಯೋಗ ಇಲಾಖೆಯ ಆಯುಕ್ತರು ಪರೀಕ್ಷಾ ವೇಳಾಪಟ್ಟಿ ಪ್ರಕಟಿಸಿದ್ದಾರೆ. ಪರೀಕ್ಷಾ ಶುಲ್ಕ ಪಾವತಿಗೆ ಹೆಚ್ಚಿನ ಕಾಲಾವಕಾಶವೂ ನೀಡಿಲ್ಲ. ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗಿದೆ. ಕೂಡಲೇ ಪರೀಕ್ಷೆ ರದ್ದುಪಡಿಸಿ, ಗೊಂದಲ ದೂರ ಮಾಡಬೇಕು ಎಂದು ಒತ್ತಾಯಿಸಿದರು.

ADVERTISEMENT

ಎಐಡಿವೈಒ ಜಿಲ್ಲಾ ಉಪಾಧ್ಯಕ್ಷ ಎಚ್‌. ಎರ್ರಿಸ್ವಾಮಿ, ಜಿಲ್ಲಾ ಉಪಾಧ್ಯಕ್ಷ ಎನ್.ಎಲ್.ಪಂಪಾಪತಿ, ತಾಲ್ಲೂಕು ಸಂಚಾಲಕ ಕೆ.ಹುಲುಗಪ್ಪ, ಎಐಡಿವೈಒ ಸದಸ್ಯರಾದ ಹುಸೇನ್ ಬಾಷಾ, ಕೆ.ವೆಂಕಟೇಶ್, ಹನುಮಂತ, ಆನಂದ್, ಅರುಣ್, ಬಾಬು ಅಂಕ್ಲೇಶ್‌, ನೂರ್ ಬಾಷಾ, ಅಬ್ದುಲ್, ಐಟಿಐ ವಿದ್ಯಾರ್ಥಿಗಳಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.