ಹೊಸಪೇಟೆ: ಕೂಡಲೇ ವಿದ್ಯಾರ್ಥಿ ವೇತನ ಬಿಡುಗಡೆಗೊಳಿಸುವಂತೆ ಆಗ್ರಹಿಸಿ ಎಐಡಿಎಸ್‍ಒ ಕಾರ್ಯಕರ್ತರು ಶುಕ್ರವಾರ ನಗರದ ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಬಳಿಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್ ಎಚ್. ವಿಶ್ವನಾಥ್ ಅವರಿಗೆ ಸಲ್ಲಿಸಿದರು.
ಕೋವಿಡ್ ಕಾರಣಕ್ಕಾಗಿ ಈ ವರ್ಷ ತಡವಾಗಿ ಶಾಲಾ, ಕಾಲೇಜುಗಳು ಆರಂಭವಾಗಿದೆ. ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಸಂಕಷ್ಟದಲ್ಲಿದ್ದಾರೆ. ಈಗಾಗಲೇ ಸಾಕಷ್ಟು ವಿಳಂಬವಾಗಿರುವುದರಿಂದ ವಿದ್ಯಾರ್ಥಿ ವೇತನ ಬಿಡುಗಡೆಗೊಳಿಸಿ ಅವರಿಗೆ ನೆರವಾಗಬೇಕು ಎಂದು ಆಗ್ರಹಿಸಿದರು.
ಎಲ್ಲ ಸರ್ಕಾರಿ ಹಾಸ್ಟೆಲ್‌ಗಳಿಗೆ ಅರ್ಜಿ ಆಹ್ವಾನಿಸಿ, ಪ್ರವೇಶ ನೀಡಬೇಕು. ಅಲ್ಲಿ ಅಗತ್ಯ ಮೂಲಸೌಕರ್ಯ ಕಲ್ಪಿಸಬೇಕು. ನಗರ ಮತ್ತು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್ ಸೌಲಭ್ಯ ಒದಗಿಸಬೇಕು. ಹೆಚ್ಚುವರಿ ಶುಲ್ಕ ಪಡೆಯಬಾರದು. ಕಾಲೇಜುಗಳಲ್ಲಿ ಅಗತ್ಯ ಬೋಧಕರ ನೇಮಕಾತಿ ಮಾಡಿಕೊಳ್ಳಬೇಕು ಎಂದು ಒತ್ತಾಯಿಸಿದರು.
ಸಂಘಟನೆಯ ಮುಖಂಡರಾದ ಸುರೇಶ, ಯರ್ರಿಸ್ವಾಮಿ ಮೊದಲಾದವರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.