ADVERTISEMENT

ಕಾಯ್ದೆ ಹಿಂಪಡೆಯಲು ವಕೀಲರ ಆಗ್ರಹ

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2019, 10:22 IST
Last Updated 19 ಸೆಪ್ಟೆಂಬರ್ 2019, 10:22 IST
ವಕೀಲರ ಸಂಘದ ಪದಾಧಿಕಾರಿಗಳು ಉಪ ತಹಶೀಲ್ದಾರ್‌ಗೆ ಮನವಿ ಪತ್ರ ಸಲ್ಲಿಸಿದರು
ವಕೀಲರ ಸಂಘದ ಪದಾಧಿಕಾರಿಗಳು ಉಪ ತಹಶೀಲ್ದಾರ್‌ಗೆ ಮನವಿ ಪತ್ರ ಸಲ್ಲಿಸಿದರು   

ಹೊಸಪೇಟೆ: ಮೋಟಾರ್‌ ವಾಹನ ಕಾಯ್ದೆಗೆ ತಿದ್ದುಪಡಿ ತಂದಿರುವುದಕ್ಕೆ ತಾಲ್ಲೂಕು ವಕೀಲರ ಸಂಘ ಕಟುವಾಗಿ ಟೀಕಿಸಿದೆ.

ಈ ಕುರಿತು ತಹಶೀಲ್ದಾರ್‌ ಎಚ್‌. ವಿಶ್ವನಾಥ್‌ ಅವರಿಗೆ ಗುರುವಾರ ಮನವಿ ಪತ್ರ ಸಲ್ಲಿಸಿದ ಸಂಘದ ಪದಾಧಿಕಾರಿಗಳು, ‘ಇದು ಜನಸಾಮಾನ್ಯರ ಹಿತಾಸಕ್ತಿಗೆ ವಿರುದ್ಧವಾದ ನಿರ್ಧಾರವಾಗಿದ್ದು, ಕೂಡಲೇ ಹಿಂಪಡೆಯಬೇಕು’ ಎಂದು ಒತ್ತಾಯಿಸಿದರು.

‘ಕಾಯ್ದೆಗೆ ತಿದ್ದುಪಡಿ ಮಾಡಿರುವುದರಿಂದ ದಂಡ ಅಧಿಕವಾಗಿದೆ. ಇದರಿಂದಾಗಿ ಸಾರ್ವಜನಿಕರು, ಕಕ್ಷಿದಾರರು ಮತ್ತು ವಕೀಲರಿಗೂ ಬಹಳ ತೊಂದರೆ ಆಗುತ್ತಿದೆ. ಹಾಗಾಗಿ ಕೂಡಲೇ ಇದನ್ನು ವಾಪಸ್‌ ಪಡೆಯಬೇಕು’ ಎಂದು ಆಗ್ರಹಿಸಿದ್ದಾರೆ.

ADVERTISEMENT

ಸಂಘದ ಅಧ್ಯಕ್ಷ ಟಿ. ಹನುಮಂತಪ್ಪ, ವಕೀಲರಾದ ತಾರಿಹಳ್ಳಿ ವೆಂಕಟೇಶ್‌, ಕಲ್ಲಂಭಟ್‌ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.