ADVERTISEMENT

ಗ್ಯಾರಂಟಿ ಯೋಜನೆಯಿಂದ ಅಭಿವೃದ್ಧಿ ಕಾರ್ಯ ಸ್ಥಗಿತ: ನೇಮರಾಜನಾಯ್ಕ

​ಪ್ರಜಾವಾಣಿ ವಾರ್ತೆ
Published 31 ಜನವರಿ 2024, 13:59 IST
Last Updated 31 ಜನವರಿ 2024, 13:59 IST
<div class="paragraphs"><p>ಕೊಟ್ಟೂರಿನಲ್ಲಿ ಬುಧವಾರ ನಡೆದ ಪಂಚ ಗ್ಯಾರಂಟಿ ಫಲಾನುಭವಿಗಳ ಸಮಾವೇಶದಲ್ಲಿ ಅರ್ಹ ಫಲಾನುಭವಿಗಳಿಗೆ&nbsp; ಶಾಸಕ ಕೆ.ನೇಮರಾಜನಾಯ್ಕ ಅವರು&nbsp; ಆದೇಶಪ್ರತಿ ವಿತರಿಸಿದರು</p></div>

ಕೊಟ್ಟೂರಿನಲ್ಲಿ ಬುಧವಾರ ನಡೆದ ಪಂಚ ಗ್ಯಾರಂಟಿ ಫಲಾನುಭವಿಗಳ ಸಮಾವೇಶದಲ್ಲಿ ಅರ್ಹ ಫಲಾನುಭವಿಗಳಿಗೆ  ಶಾಸಕ ಕೆ.ನೇಮರಾಜನಾಯ್ಕ ಅವರು  ಆದೇಶಪ್ರತಿ ವಿತರಿಸಿದರು

   

ಕೊಟ್ಟೂರು: ಜನರಿಗೆ ಆರ್ಥಿಕ ಹಾಗೂ ಸಾಮಾಜಿಕ ಶಕ್ತಿ ತುಂಬಲು ಸರ್ಕಾರ ಪಂಚ ಗ್ಯಾರಂಟಿಗಳನ್ನು ಜಾರಿಗೊಳಿಸಿದರೂ ಸಮರ್ಪಕವಾಗಿ ಈಡೇರದಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ ಎಂದು ಶಾಸಕ ಕೆ.ನೇಮರಾಜನಾಯ್ಕ ಹೇಳಿದರು.

ಪಟ್ಟಣದ ಎಪಿಎಂಸಿ ಆವರಣದಲ್ಲಿ ಬುಧವಾರ ಏರ್ಪಡಿಸಿದ್ದ ಪಂಚ ಗ್ಯಾರಂಟಿ ಫಲಾನುಭವಿಗಳ ಸಮಾವೇಶದ ಅಧ್ಯಕ್ಷತೆ ವಹಿಸಿ ಯೋಜನೆಗಳ ಸೌಲಭ್ಯ ಪಡೆದ ಫಲಾನುಭವಿಗಳ ಪರವಾಗಿ ಸಾಂಕೇತಿಕವಾಗಿ ಕೆಲವರಿಗೆ ಆದೇಶ ಪ್ರತಿ ವಿತರಿಸಿ ಮಾತನಾಡಿ, ‘ಚುನಾವಣೆಯಲ್ಲಿ ನೀಡಿದ ಭರವಸೆ ಈಡೇರಿಸಲು ಸರ್ಕಾರ ಅವಸರದಿಂದ ಮುಂದಾದರೂ ಪೂರ್ವ ಸಿದ್ಧತೆಗಳಿಲ್ಲದೆ ಜಾರಿಗೊಳಿಸಿದ ಪರಿಣಾಮ ಬಹುತೇಕ ಫಲಾನುಭವಿಗಳಿಗೆ ಯೋಜನೆಯ ಲಾಭ ಪಡೆಯಲು ವಂಚಿತರಾಗಿದ್ದು ಇಂದಿಗೂ ಕಚೇರಿಗಳಿಗೆ ಅಲೆದಾಡುತ್ತಿದ್ದಾರೆ’ ಎಂದರು.

ADVERTISEMENT

‘ಗ್ಯಾರಂಟಿ ಯೋಜನೆಯಿಂದ ಅಭಿವೃದ್ಧಿ ಕಾರ್ಯಕ್ರಮಗಳು ಸ್ಥಗಿತಗೊಂಡಿವೆ. ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಜನ ಆರ್ಥಿಕವಾಗಿ ಸಬಲರಾಗಿರಿ’ ಎಂದರು.

ಮುಖಂಡರಾದ ಎಂ.ಎಂ.ಜೆ.ಹರ್ಷವರ್ಧನ್, ಪಟ್ಟಣ ಪಂಚಾಯ್ತಿ ಸದಸ್ಯರು, ತಹಶೀಲ್ದಾರ್ ಜಿ.ಕೆ.ಅಮರೀಶ್, ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ವೈ.ರವಿಕುಮಾರ್, ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ಎ.ನಸರುಲ್ಲಾ ಹಾಗೂ ಇಲಾಖಾಧಿಕಾರಿಗಳು ಪಾಲ್ಗೊಂಡಿದ್ದರು.

ಬೆಳಿಗ್ಗೆ 11 ಗಂಟೆಗೆ ಆರಂಭವಾಗಬೇಕಿದ್ದ ಕಾರ್ಯಕ್ರಮ ಎರಡು ಗಂಟೆ ತಡವಾಗಿ ಆರಂಭವಾಯಿತು. ಇದರಿಂದ ಮಹಿಳೆಯರು ತೊಂದರೆ ಅನುಭವಿಸುವಂತಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.