ADVERTISEMENT

ಅಭಿವೃದ್ಧಿ ಕಾಮಗಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಚಾಲನೆ 9ರಂದು

​ಪ್ರಜಾವಾಣಿ ವಾರ್ತೆ
Published 6 ಅಕ್ಟೋಬರ್ 2024, 14:31 IST
Last Updated 6 ಅಕ್ಟೋಬರ್ 2024, 14:31 IST
ಕಂಪ್ಲಿ ತಾಲ್ಲೂಕು ನೆಲ್ಲೂಡಿ ಕೊಟ್ಟಾಲ್ ಗ್ರಾಮದಲ್ಲಿ ₹25 ಲಕ್ಷ ವೆಚ್ಚದ ಸಮುದಾಯ ನೈರ್ಮಲ್ಯ ಸಂಕೀರ್ಣ ಕಟ್ಟಡ ಕಾಮಗಾರಿಗೆ ಶಾಸಕ ಜೆ.ಎನ್. ಗಣೇಶ್ ಭೂಮಿಪೂಜೆ ನೆರವೇರಿಸಿದರು
ಕಂಪ್ಲಿ ತಾಲ್ಲೂಕು ನೆಲ್ಲೂಡಿ ಕೊಟ್ಟಾಲ್ ಗ್ರಾಮದಲ್ಲಿ ₹25 ಲಕ್ಷ ವೆಚ್ಚದ ಸಮುದಾಯ ನೈರ್ಮಲ್ಯ ಸಂಕೀರ್ಣ ಕಟ್ಟಡ ಕಾಮಗಾರಿಗೆ ಶಾಸಕ ಜೆ.ಎನ್. ಗಣೇಶ್ ಭೂಮಿಪೂಜೆ ನೆರವೇರಿಸಿದರು   

ಕಂಪ್ಲಿ: ‘ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಅ.9ರಂದು ಪಟ್ಟಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ₹100 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ’ ಎಂದು ಶಾಸಕ ಜೆ.ಎನ್. ಗಣೇಶ್ ತಿಳಿಸಿದರು.

ತಾಲ್ಲೂಕಿನ ನೆಲ್ಲುಡಿ ಕೊಟ್ಟಾಲ್ ಗ್ರಾಮದಲ್ಲಿ ₹25 ಲಕ್ಷ ವೆಚ್ಚದ ಕಲ್ಯಾಣ ಕರ್ನಾಟಕ ಪ್ರದೇಶದ ಸಮುದಾಯ ನೈರ್ಮಲ್ಯ ಸಂಕೀರ್ಣ ಕಟ್ಟಡ ನಿರ್ಮಾಣ ಕಾಮಗಾರಿಗೆ ಭಾನುವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ‘ಶ್ರಮಶಕ್ತಿ ಯೋಜನೆಯಡಿ 50 ಫಲಾನುಭವಿಗಳಿಗೆ ಸಾಲ ಸೌಲಭ್ಯ, ಆಂಬ್ಯುಲೆನ್ಸ್ ಸೇರಿ ಹಲವು ಸರ್ಕಾರಿ ಸೌಕರ್ಯಗಳನ್ನು ಅರ್ಹ ಫಲಾನುಭವಿಗಳಿಗೆ ವಿತರಿಸಲಿದ್ದಾರೆ’ ವಿವರಿಸಿದರು.

‘ಕ್ಷೇತ್ರಕ್ಕೆ 5 ಸಾವಿರ ಮನೆ ಮಂಜೂರು ಮಾಡುವಂತೆ ಸಚಿವರಿಗೆ ಪ್ರಸ್ತಾವನೆ ಸಲ್ಲಿಸಿದ್ದು, ಸ್ಪಂದಿಸುವ ಸಾಧ್ಯತೆ ಇದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ADVERTISEMENT

ತಾಲ್ಲೂಕು ಪಂಚಾಯ್ತಿ ಇಒ ಆರ್.ಕೆ.ಶ್ರೀಕುಮಾರ್, ಪಿಡಿಒ ಹಾಲಹರವಿ ಶೇಷಗಿರಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಯಮ್ಮ, ಸದಸ್ಯರಾದ ಜ್ಯೋತಿ, ಮಸ್ತಾನಪ್ಪ, ಪ್ರಮುಖರಾದ ಲಕ್ಷ್ಮಿನಾರಾಯಣ, ಕೃಷ್ಣ, ಸಂದೀಪ್, ವೆಂಕಟೇಶ, ಮಲ್ಲೇಶ್, ಸಿಬ್ಬಂದಿ ರಾಜಸಾಬ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.