ADVERTISEMENT

‘ಪರಿಸರ ಕಲುಷಿತಗೊಂಡರೆ ಮನುಕುಲಕ್ಕೆ ಉಳಿಗಾಲವಿಲ್ಲ’

​ಪ್ರಜಾವಾಣಿ ವಾರ್ತೆ
Published 19 ಜೂನ್ 2024, 16:04 IST
Last Updated 19 ಜೂನ್ 2024, 16:04 IST
<div class="paragraphs"><p> ಕೊಟ್ಟೂರು ತಾಲ್ಲೂಕಿನ ಉಜ್ಜಯಿನಿ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ವತಿಯಿಂದ ಬುಧವಾರ ಏರ್ಪಡಿಸಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಎ.ಎಂ.ಚನ್ನವೀರಸ್ವಾಮಿ ಸಸಿ ನೆಡುವ ಮೂಲಕ ಚಾಲನೆ ನೀಡಿದರು..</p></div>

ಕೊಟ್ಟೂರು ತಾಲ್ಲೂಕಿನ ಉಜ್ಜಯಿನಿ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ವತಿಯಿಂದ ಬುಧವಾರ ಏರ್ಪಡಿಸಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಎ.ಎಂ.ಚನ್ನವೀರಸ್ವಾಮಿ ಸಸಿ ನೆಡುವ ಮೂಲಕ ಚಾಲನೆ ನೀಡಿದರು..

   

ಕೊಟ್ಟೂರು: ಪರಿಸರ ಉಳಿದರೆ ನಾವು ಉಳಿಯುತ್ತೇವೆ. ಪರಿಸರ ಕಲುಷಿತಗೊಂಡರೆ ಮುಂದಿನ ದಿನಗಳಲ್ಲಿ ಮನುಕುಲಕ್ಕೆ ಉಳಿಗಾಲವಿಲ್ಲ. ಎಂದು ಹಿರಿಯ ನಾಗರಿಕ ವೇದಿಕೆ ಅಧ್ಯಕ್ಷ ಎ.ಎಂ.ಚನ್ನವೀರಸ್ವಾಮಿ ತಿಳಿಸಿದರು.

ತಾಲ್ಲೂಕಿನ ಉಜ್ಜಯಿನಿ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ವತಿಯಿಂದ ಶ್ರೀ ದಾರುಕ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಬುಧವಾರ ಏರ್ಪಡಿಸಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ ಕೊರೋನಾ ಸಮಯದಲ್ಲಿ ಆಮ್ಲಜನಕದ ಮಹತ್ವ ಅರಿವಾಗಿದೆ. ಹೀಗಾಗಿ ನಾವೆಲ್ಲಾ ಸಸಿಗಳನ್ನು ನೆಡುವುದರೊಂದಿಗೆ ಸಂರಕ್ಷಣೆ ಮಾಡುವ ಹೊಣೆಗಾರಿಕೆಯೂ ನಮ್ಮ ಮೇಲಿದೆ ಎಂದರು.

ADVERTISEMENT

ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಡಿ.ನಿಂಗಮ್ಮ ಮಾತನಾಡಿ ಮನೆಗೊಂದು ಮರ ಊರಿಗೊಂದು ವನ ನಿರ್ಮಿಸಿದರೆ ನಮ್ಮ ಬದುಕು ಹಸನಗೊಳ್ಳುತ್ತದೆ ಎಂದರು.

ಈ ಸಂದರ್ಭದಲ್ಲಿ ಪರಿಸರದ ಬಗ್ಗೆ ಏರ್ಪಡಿಸಿದ್ದ ಪ್ರಭಂದ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಗ್ರಾಮ ಪಂಚಾಯ್ತಿ ಉಪಾಧ್ಯಕ್ಷೆ ಪುಷ್ಪಾ ಹಾಗೂ ಸದಸ್ಯರು, ಜನ ಜಾಗೃತಿ ವೇದಿಕೆ ಸದಸ್ಯೆ ನೇತ್ರಾವತಿ, ಮಲ್ಲಿಕಾರ್ಜುನ್, ಮಂಜಣ್ಣ, ಹುಲಿಗೆಮ್ಮ, ಮುಖ್ಯ ಶಿಕ್ಷಕಿ ರೂಪ ಹಾಗೂ ಶಿಕ್ಷಕರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.