ADVERTISEMENT

ಫಸಲ್‌ ವಿಮೆ ಪ್ರಚಾರ ವಾಹನಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 1 ಡಿಸೆಂಬರ್ 2022, 13:11 IST
Last Updated 1 ಡಿಸೆಂಬರ್ 2022, 13:11 IST
ಜಿಲ್ಲಾಧಿಕಾರಿ ಟಿ. ವೆಂಕಟೇಶ್‌ ಅವರು ಗುರುವಾರ ಹೊಸಪೇಟೆಯಲ್ಲಿ ಫಸಲ್‌ ವಿಮೆ ಯೋಜನೆಗೆ ಚಾಲನೆ ನೀಡಿ, ಅದರ ಕರಪತ್ರ ಬಿಡುಗಡೆಗೊಳಿಸಿದರು
ಜಿಲ್ಲಾಧಿಕಾರಿ ಟಿ. ವೆಂಕಟೇಶ್‌ ಅವರು ಗುರುವಾರ ಹೊಸಪೇಟೆಯಲ್ಲಿ ಫಸಲ್‌ ವಿಮೆ ಯೋಜನೆಗೆ ಚಾಲನೆ ನೀಡಿ, ಅದರ ಕರಪತ್ರ ಬಿಡುಗಡೆಗೊಳಿಸಿದರು   

ಹೊಸಪೇಟೆ (ವಿಜಯನಗರ): ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್‌ ವಿಮೆ ಯೋಜನೆಯ ಪ್ರಚಾರ ವಾಹನಕ್ಕೆ ಜಿಲ್ಲಾಧಿಕಾರಿ ಟಿ. ವೆಂಕಟೇಶ್‌ ಗುರುವಾರ ನಗರದಲ್ಲಿ ಚಾಲನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಏರ್ಪಡಿಸಿದ್ದ ಕಚೇರಿಯಲ್ಲಿ ಜಿಲ್ಲಾಧಿಕಾರಿ, ವಾಹನಕ್ಕೆ ಹಸಿರು ನಿಶಾನೆ ತೋರಿದರು. ಕೃಷಿ ಇಲಾಖೆಯ ವಿಜಯನಗರ ಜಿಲ್ಲಾ ಜಂಟಿ ಕೃಷಿ ನಿರ್ದೇಶಕ ಶರಣಪ್ಪ ಮುದಗಲ್‌ ಮಾತನಾಡಿ, ಫಸಲ್‌ ವಿಮೆ ಯೋಜನೆಯನ್ನು ‘ಫ್ಯೂಚರ್‌ ಜನರಲ್‌ ಇನ್‌ಶೂರೆನ್ಸ್‌ ಕಂಪನಿ ಅನುಷ್ಠಾನಗೊಳಿಸುತ್ತಿದೆ. ಪ್ರತಿಯೊಬ್ಬರು ಬೆಳೆಗಳಿಗೆ ವಿಮೆ ಮಾಡಿಸಿದರೆ ಅತಿವೃಷ್ಟಿ, ಅನಾವೃಷ್ಟಿಯಿಂದ ಸಮಸ್ಯೆಯಾದರೆ ಪರಿಹಾರ ಪಡೆಯಬಹುದು. ಇದರ ಬಗ್ಗೆ ಹೆಚ್ಚಿನ ಮಾಹಿತಿ ಆಯಾ ರೈತ ಸಂಪರ್ಕ ಕೇಂದ್ರಗಳಲ್ಲಿ ರೈತರು ಪಡೆಯಬಹುದು ಎಂದು ತಿಳಿಸಿದರು.

ವಿಮೆ ವ್ಯಾಪ್ತಿಗೆ ಒಳಪಡುವ ಅಧಿಸೂಚಿತ ಬೆಳೆಗಳು, ಪ್ರೀಮಿಯಂ ಕಂತಿನ ವಿವರವನ್ನು ಅಧಿಕಾರಿಗಳು, ಸಿಬ್ಬಂದಿ ವರ್ಗದವರು ರೈತರಿಗೆ ಸರಿಯಾಗಿ ನೀಡಬೇಕೆಂದು ಸೂಚಿಸಿದರು.

ADVERTISEMENT

ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕ ಕೆ. ವಾಮದೇವ, ಸಹಾಯಕ ತೋಟಗಾರಿಕೆ ನಿರ್ದೇಶಕ ಶಂಕರ್‌, ಕೃಷಿ ಅಧಿಕಾರಿ ವೆಂಕಟೇಶ್‌ ಇದ್ದರು. ಹೊಸಪೇಟೆ, ಕಮಲಾಪುರ, ನಾಗೇನಹಳ್ಳಿ, ಸಂಕ್ಲಾಪುರ, ಅಮರಾವತಿ, ಹೊಸೂರು ಸೇರಿದಂತೆ ಇತರೆ ಭಾಗದ ರೈತರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.