ಹೊಸಪೇಟೆ (ವಿಜಯನಗರ): ಹಂಪಿ ಪ್ರವಾಸದಲ್ಲಿದ್ದ ಇಂಗ್ಲೆಂಡ್ ಪ್ರಜೆ ಅನಾರೋಗ್ಯದಿಂದ ಮಂಗಳವಾರ ಮೃತಪಟ್ಟಿದ್ದಾರೆ.
ಟಿಮೋಟಿ ರ್‍ಯಾಂಡಲ್ ಬ್ರೌನ್ (67) ಮೃತರು. ‘ಟಿಮೋಟಿ ಅವರು ಎರಡು ವಾರಗಳ ಹಿಂದೆ ಹಂಪಿ ಪ್ರವಾಸಕ್ಕೆ ಬಂದಿದ್ದರು. ಹಂಪಿಯ ಉದಯಕುಮಾರ್ ಎಂಬುವರ ಮನೆಯಲ್ಲಿ ಉಳಿದುಕೊಂಡಿದ್ದರು. ಸೋಮವಾರ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಆದರೆ, ಚಿಕಿತ್ಸೆ ಫಲಿಸದೇ ಮಂಗಳವಾರ ಮೃತಪಟ್ಟಿದ್ದಾರೆ. ಹಂಪಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಳ್ಳಾರಿಯ ವಿಮ್ಸ್ ಶವಾಗಾರದಲ್ಲಿ ಅವರ ಶರೀರ ಇಡಲಾಗಿದೆ. ಈ ಕುರಿತು ಇಂಗ್ಲೆಂಡ್ ರಾಯಭಾರ ಕಚೇರಿಗೆ ಮಾಹಿತಿ ಕೊಡಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.