ಬಳ್ಳಾರಿ: ಮಹಾತ್ಮ ಗಾಂಧೀಜಿ ಅವರ ಜಯಂತಿ ಅಂಗವಾಗಿ ನಗರದ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಶ್ರಮದಾನ ಮಾಡುವ ಮೂಲಕ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿದರು.
ಯುವ ಸಬಲೀಕರಣ ಕ್ರೀಡಾ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಚಿವರೂ ಆಗಿರುವ ನಾಗೇಂದ್ರ, ಗಾಂಧಿಜೀ ಅವರ ಸ್ವಚ್ಚ ಭಾರತದ ಕನಸನ್ನ ನನಸು ಮಾಡಬೇಕಿದೆ ಇದು ಇವತ್ತಿಗಷ್ಟೆ ಸೀಮಿತವಾಗದೆ, ಪ್ರತಿವಾರ ಚುನಾಯಿತ ಪ್ರತಿನಿಧಿಗಳು ಜನರ ಸಹಭಾಗಿತ್ವದಲ್ಲಿ ಸ್ವಚ್ಚತಾ ಕಾರ್ಯದಲ್ಲಿ ಭಾಗಿಯಾಗಬೇಕು ವಾರ್ಡ್‌ಗಳನ್ನ ಸ್ವಚ್ಚವಾಗಿಟ್ಟುಕೊಳ್ಳಬೇಕು ಎಂದು ಸಲಹೆ ನೀಡಿದರು.
ಬಳ್ಳಾರಿಯನ್ನು ಸುಂದರ ಹಾಗೂ ಸ್ವಚ್ಚ ಬಳ್ಳಾರಿಯನ್ನಾಗಿ ಮಡುವ ಸಂಕಲ್ಪ ಹೊಂದಿದ್ದೇವೆ. ಮೈಸೂರು ಮಾದರಿಯಲ್ಲಿ ಬಳ್ಳಾರಿ ನಗರವನ್ನು ಮಾದರಿ ನಗರವನ್ನಾಗಿ ಮಾಡುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ರಾಜ್ಯಸಭಾ ಸದಸ್ಯ ಡಾ.ಸಯ್ಯದ್ ನಾಸಿರ್ ಹುಸೇನ್, ನಗರ ಶಾಸಕ ನಾರಾ ಭರತ್ ರೆಡ್ಡಿ, ಮೆಯರ್ ಡಿ.ತ್ರಿವೇಣಿ, ಉಪಮೇಯರ್ ಜಾನಕಮ್ಮ, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರ, ಸಿಇಒ ರಾಹುಲ್ ಸಂಕನೂರ, ಪಾಲಿಕೆ ಅಯುಕ್ತ ಖಲೀಲ್ ಸೇರಿದಂತೆ ಮಹಾನರಪಾಲಿಕೆ ಸದಸ್ಯರು, ಮುಖಂಡರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.