ADVERTISEMENT

‘ಬಡವರ ಏಳಿಗೆಗೆ ಗ್ಯಾರಂಟಿ ಯೋಜನೆ ಸಹಕಾರಿ‘

​ಪ್ರಜಾವಾಣಿ ವಾರ್ತೆ
Published 1 ಫೆಬ್ರುವರಿ 2024, 14:03 IST
Last Updated 1 ಫೆಬ್ರುವರಿ 2024, 14:03 IST
ಕಾನಹೊಸಹಳ್ಳಿಯ ಗಾಣಿಗರ ಸಮುದಾಯ ಭವನದಲ್ಲಿ ನಡೆದ ಕಾನಹೊಸಹಳ್ಳಿ ಹೋಬಳಿ ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಸಮಾವೇಶಕ್ಕೆ ಶಾಸಕ ಡಾ.ಶ್ರೀನಿವಾಸ್ ಎನ್.ಟಿ. ಚಾಲನೆ ನೀಡಿದರು
ಕಾನಹೊಸಹಳ್ಳಿಯ ಗಾಣಿಗರ ಸಮುದಾಯ ಭವನದಲ್ಲಿ ನಡೆದ ಕಾನಹೊಸಹಳ್ಳಿ ಹೋಬಳಿ ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಸಮಾವೇಶಕ್ಕೆ ಶಾಸಕ ಡಾ.ಶ್ರೀನಿವಾಸ್ ಎನ್.ಟಿ. ಚಾಲನೆ ನೀಡಿದರು   

ಕಾನಹೊಸಹಳ್ಳಿ: ‘ಬಡವರ, ದೀನ ದಲಿತರ ಶೋಷಿತರ, ಮಹಿಳೆಯರ ಏಳಿಗೆಗೆ ಪಂಚ ಗ್ಯಾರಂಟಿ ಯೋಜನೆ ಸಹಕಾರಿಯಾಗಿದೆ’  ಎಂದು ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಹೇಳಿದರು.

ಇಲ್ಲಿನ ಗಾಣಿಗರ ಸಮುದಾಯ ಭವನದಲ್ಲಿ ಗುರುವಾರ ನಡೆದ ಕಾನಹೊಸಹಳ್ಳಿ ಹೋಬಳಿ ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಸಮಾವೇಶ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

‘ದೇಶದಲ್ಲಿಯೇ ಪಂಚ ಗ್ಯಾರಂಟಿ ಯೋಜನೆಗಳು ಮಾದರಿಯಾಗಿವೆ.  ಅಂಬೇಡ್ಕರ್, ದೇವರಾಜ್ ಅರಸು ಅವರು ದೀನದಲಿತರು, ಶೋಷಿತರ ಪರವಾಗಿ ಧ್ವನಿ ಎತ್ತಿ ಅವರ ಏಳ್ಗೆಗಾಗಿ ಶ್ರಮಿಸಿದ್ದು, ಅವರ ಸಾಲಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೇರುತ್ತಾರೆ’ ಎಂದರು.

ADVERTISEMENT

ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ವೈ. ರವಿಕುಮಾರ್, ತಹಶೀಲ್ದಾರ್ ರೇಣುಕಮ್ಮ, ಗ್ರಾಮ ಪಂಚಾಯ್ತಿ ಅಧ್ಯಕ್ಷ ಚೇತನ ಎ.ಸಿ, ಶಿಶು ಅಭಿವೃದ್ಧಿ ಇಲಾಖಾಧಿಕಾರಿ ಮಾಲಂಬಿ, ಜೆಸ್ಕಾಂ ಎಇಇ ಪ್ರಕಾಶ್ ಪತ್ತೆನೂರು, ಸಾರಿಗೆ ಘಟಕ ವ್ಯವಸ್ಥಾಪಕ ಮರಿಲಿಂಗಿಪ್ಪ ಮುಖಂಡರಾದ ಕೆ.ಎಂ ಶಶಿಧರ ಸ್ವಾಮಿ ಮಾತನಾಡಿದರು.

ಉಪಾಧ್ಯಕ್ಷೆ ನೇತ್ರಾವತಿ ಮಂಜುನಾಥ, ಕಾನಹೊಸಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕುಮಾರ್ ಗೌಡ, ಕೂಡ್ಲಿಗಿ ಬ್ಲಾಕ್ ಅಧ್ಯಕ್ಷ ಗುರುಸಿದ್ದನಗೌಡ, ಎಎಸ್‌ಐ ಎಸ್.ಕೆ.ಜಿಲಾನಿ, ಅಭಿವೃದ್ಧಿ ಅಧಿಕಾರಿ ಭರತ್ ಕುಮಾರ್ ಇತರರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.