ಹರಪನಹಳ್ಳಿ : ಹಿರೆಕೆರೆ ಮತ್ತು ಅಯ್ಯನಕೆರೆ ಅತೀ ಕ್ರಮಿತ ಪ್ರದೇಶದಲ್ಲಿ ಕೊಳಗೇರಿ ಅಭಿವೃದ್ಧಿ ಮಂಡಳಿಯ ಸಹಾಯಧನ ಪಡೆದು ಕಾನೂನು ಬಾಹಿರವಾಗಿ ಮನೆ ನಿರ್ಮಿಸುತ್ತಿರುವವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಅಖಿಲ ಭಾರತ ಕಿಸಾನ್ ಮಹಾಸಭಾ ಅಧ್ಯಕ್ಷ ಇದ್ಲಿ ರಾಮಪ್ಪ ಒತ್ತಾಯಿಸಿದ್ದಾರೆ.
ಕೆರೆ ಸಂರಕ್ಷಣಾ ಮತ್ತು ಅಭಿವೃದ್ಧಿ ಕಾಯ್ದೆ ಸೆಕ್ಷನ್ 12ರ ಪ್ರಕಾರ ಕೆರೆ ಪ್ರದೇಶದಲ್ಲಿ ಕಟ್ಟಡ ನಿರ್ಮಿಸುವಂತಿಲ್ಲ. ಅಂತಹ ಪ್ರದೇಶ ಅತೀ ಕ್ರಮಣ ಮಾಡಿಕೊಂಡವರಿಗೆ, ಕೊಳಗೇರಿ ಅಭಿವೃದ್ಧಿ ಮಂಡಳಿ ಮನೆಗಳನ್ನು ನಿರ್ಮಿಸಿಕೊಡುತ್ತಿದೆ. ಇದಕ್ಕೆ ಕುಮ್ಮಕ್ಕು ನೀಡುತ್ತಿರುವ ಮಂಡಳಿಯ ಎಂಜಿನಿಯರ್ ಶಿವಕುಮಾರ ಮತ್ತು ಖಾಸಗಿ ಗುತ್ತಿಗೆದಾರರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.