ADVERTISEMENT

ಭಾನುವಾರವೂ ಮೃಗಾಲಯ ವೀಕ್ಷಣೆಗೆ ಮುಕ್ತ

​ಪ್ರಜಾವಾಣಿ ವಾರ್ತೆ
Published 31 ಜುಲೈ 2020, 13:14 IST
Last Updated 31 ಜುಲೈ 2020, 13:14 IST
ಅಟಲ್‌ ಬಿಹಾರಿ ವಾಜಪೇಯಿ ಜೈವಿಕ ಉದ್ಯಾನದಲ್ಲಿನ ಹುಲಿ ಸಫಾರಿಗೆ ಹೋಗುವ ಪ್ರವೇಶ ದ್ವಾರ
ಅಟಲ್‌ ಬಿಹಾರಿ ವಾಜಪೇಯಿ ಜೈವಿಕ ಉದ್ಯಾನದಲ್ಲಿನ ಹುಲಿ ಸಫಾರಿಗೆ ಹೋಗುವ ಪ್ರವೇಶ ದ್ವಾರ   

ಹೊಸಪೇಟೆ: ‘ಕಮಲಾಪುರದ ಅಟಲ್‌ ಬಿಹಾರಿ ವಾಜಪೇಯಿ ಜೈವಿಕ ಉದ್ಯಾನ ಆ. 2ರಿಂದ ಪ್ರತಿ ಭಾನುವಾರ ಸಾರ್ವಜನಿಕರ ವೀಕ್ಷಣೆಗೆ ತೆರೆದಿರಲಿದೆ’ ಎಂದು ಉದ್ಯಾನದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಂ.ಎನ್‌. ಕಿರಣ್‌ ಶುಕ್ರವಾರ ತಿಳಿಸಿದ್ದಾರೆ.

‘ಕೊರೊನಾ ಸೋಂಕು ಹರಡುವುದನ್ನು ತಡೆಗೆ ಭಾನುವಾರ ವಿಧಿಸಿದ್ದ ಲಾಕ್‌ಡೌನ್‌ ಅನ್ನು ಸರ್ಕಾರ ತೆಗೆದು ಹಾಕಿರುವ ಕಾರಣ ಈ ನಿರ್ಧಾರಕ್ಕೆ ಬರಲಾಗಿದೆ. ಮಂಗಳವಾರ ರಜಾ ದಿನ ಹೊರತುಪಡಿಸಿ ಉಳಿದ ದಿನಗಳಲ್ಲಿ ಸಾರ್ವಜನಿಕರು ಉದ್ಯಾನಕ್ಕೆ ಬರಬಹುದು’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT