ADVERTISEMENT

ಬಳ್ಳಾರಿ: ನೀತಿ ಸಂಹಿತೆ ಪರಿಣಾಮಕಾರಿಯಾಗಿ ಜಾರಿಗೆ ಸೂಚನೆ 

ಎಲ್ಲಾ ಡಿಸಿಗಳ ಜತೆ  ಮುಖ್ಯ ಚುನಾವಣಾಧಿಕಾರಿ ಸಭೆ

​ಪ್ರಜಾವಾಣಿ ವಾರ್ತೆ
Published 16 ಮಾರ್ಚ್ 2024, 16:32 IST
Last Updated 16 ಮಾರ್ಚ್ 2024, 16:32 IST

ಬಳ್ಳಾರಿ: ಚುನಾವಣಾ ಮಾದರಿ ನೀತಿ ಸಂಹಿತೆ ಪರಿಣಾಮಕಾರಿಯಾಗಿ ಜಾರಿಗೊಳಿಸುವಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮಿಶ್ರಾ ಅವರು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ. 

ಚುನಾವಣೆ ಹಿನ್ನೆಲೆಯಲ್ಲಿ ಅವರು ಶನಿವಾರ ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್‌ ನಡೆಸಿದರು. 

ಸ್ಥಳೀಯ ರಾಜಕೀಯ ನಾಯಕರೊಂದಿಗೆ ಸಭೆ ನಡೆಸಬೇಕು. ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಬೇಕು. ನೀತಿ ಸಂಹಿತೆ ಉಲ್ಲಂಘನೆಯಾಗಬಾರದು ಎಂದು ಸೂಚನೆ ನೀಡಿದರು. 

ADVERTISEMENT

ಫ್ಲೈಯಿಂಗ್‌ ಸ್ಕ್ವಾಡ್‌, ವೀಡಿಯೋ ಸರ್ವೆಲನ್ಸ್, ವೀಡಿಯೋ ವಿವ್ಹಿಂಗ್ ತಂಡಗಳು,  ಜಿಪಿಎಸ್ ಟ್ರ್ಯಾಕಿಂಗ್ ಅಳವಡಿಸಿರುವ ವಾಹನಗಳನ್ನು ಬಳಸಬೇಕು. ಚೆಕ್ ಪೋಸ್ಟ್‌ಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳು ಚಾಲ್ತಿಯಲ್ಲಿವೆಯೇ ಎಂಬುದನ್ನು ಖಾತ್ರಿಪಡಿಸಿಕೊಳ್ಳಬೇಕು. ಕಂಟ್ರೋಲ್ ರೂಂಗಳ ಕಡೆಗೂ ಗಮನ ಹರಿಸಬೇಕು ಎಂದು ನಿರ್ದೇಶನ ನೀಡಿದರು.

ಕಾರ್ಯಪ್ರವೃತ್ತರಾಗಿ:  ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಚುನಾವಣಾ ಕಾರ್ಯಕ್ಕೆ ನಿಯೋಜನೆಗೊಂಡ ಅಧಿಕಾರಿಗಳು, ಸಿಬ್ಬಂದಿಗಳು ಕಾರ್ಯಪ್ರವೃತ್ತರಾಗಿ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಎಲ್ಲಾ ನೋಡಲ್ ಅಧಿಕಾರಿಗಳು, ಸಹಾಯಕ ಚುನಾವಣಾಧಿಕಾರಿಗಳು, ಬಿಎಲ್‍ಒಗಳಿಗೆ ಸೂಚಿಸಿದರು.

ಚುನಾವಣೆ ಘೋಷಣೆ ಹಿನ್ನೆಲೆಯಲ್ಲಿ ಅವರು ಜಿಲ್ಲೆಯ ಅಧಿಕಾರಿಗಳೊಂದಿಗೆ ಶನಿವಾರ ಸಂಜೆ ಸಭೆ ನಡೆಸಿದರು. ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು ಕಟ್ಟುನಿಟ್ಟಿನ ಪಾಲನೆಯಾಗಬೇಕು ಎಂದರು. ಚುನಾವಣೆಯನ್ನು ಯಶಸ್ವಿಯಾಗಿ ನಡೆಸಲು ಎಲ್ಲರೂ ಕಾರ್ಯಪ್ರವೃತ್ತರಾಗಬೇಕು ಎಂದು ತಿಳಿಸಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.