ADVERTISEMENT

ಶೀಘ್ರ ಇಂದಿರಾ ಕ್ಯಾಂಟಿನ್ ಆರಂಭ

ಮರಿಯಮ್ಮನಹಳ್ಳಿಯ ರಾಜ್ಯ ಹೆದ್ದಾರಿ ಮೇಲೆ ನಿರ್ಮಾಣ

​ಪ್ರಜಾವಾಣಿ ವಾರ್ತೆ
Published 3 ಜುಲೈ 2024, 14:48 IST
Last Updated 3 ಜುಲೈ 2024, 14:48 IST
ಮರಿಯಮ್ಮನಹಳ್ಳಿಯಲ್ಲಿ ಆರಂಭಿಸಲಾಗುತ್ತಿರುವ ಇಂದಿರಾ ಕ್ಯಾಂಟೀನ್ ಕಟ್ಟಡ ನಿರ್ಮಾಣ ಮಾಡುವ ಕಾಮಗಾರಿ ಮಂಗಳವಾರ ನಡೆಯಿತು.
ಮರಿಯಮ್ಮನಹಳ್ಳಿಯಲ್ಲಿ ಆರಂಭಿಸಲಾಗುತ್ತಿರುವ ಇಂದಿರಾ ಕ್ಯಾಂಟೀನ್ ಕಟ್ಟಡ ನಿರ್ಮಾಣ ಮಾಡುವ ಕಾಮಗಾರಿ ಮಂಗಳವಾರ ನಡೆಯಿತು.   

ಮರಿಯಮ್ಮನಹಳ್ಳಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಇಂದಿರಾ ಕ್ಯಾಂಟೀನ್ ಪಟ್ಟಣದಲ್ಲಿ ತಿಂಗಳೊಳಗೆ ಕಾರ್ಯಾರಂಭ ಮಾಡಲಿದೆ.

ಇನ್ನು ಇಂದಿರಾ ಕ್ಯಾಂಟೀನ್ ನಿರ್ಮಾಣಕ್ಕೆ ಈಗಾಗಲೇ ಬೆಡ್ ನಿರ್ಮಾಣ ಮಾಡಿದ್ದು, ಮಂಗಳವಾರ ಕಾರ್ಮಿಕರು ಕಟ್ಟಡಕ್ಕೆ ಸ್ಲ್ಯಾಬ್‍ಗಳನ್ನು ಹೊಂದಿಸುವ ಕಾರ್ಯದಲ್ಲಿ ತೊಡಗಿದ್ದು ಕಂಡು ಬಂದಿತು.

ಇದಕ್ಕಾಗಿ ಈಗಾಗಲೇ ಹೊಸಪೇಟೆ-ಶಿವಮೊಗ್ಗ ರಾಜ್ಯ ಹೆದ್ದಾರಿ 25ಕ್ಕೆ ಹೊಂದಿಕೊಂಡಂತೆ ವಾರದ ಸಂತೆ ಮಾರುಕಟ್ಟೆ ಬಳಿ ಗುರುತಿಸಿದ 50 ಅಡಿ ಉದ್ದ ಹಾಗೂ 50 ಅಡಿ ಅಗಲ ಹೊಂದಿದ ಸ್ಥಳದಲ್ಲಿ ಕ್ಯಾಂಟಿನ್ ನಿರ್ಮಾಣ ಮಾಡಲಾಗುತ್ತಿದೆ.

ADVERTISEMENT

ಇನ್ನು ಇದೇ ಮೈದಾನದಲ್ಲಿ ಪ್ರತಿ ಸೋಮವಾರ ವಾರದ ಸಂತೆ ಮಾರುಕಟ್ಟೆ ನಡೆಯುವುದರಿಂದ ಸುತ್ತಮುತ್ತಲ ಗ್ರಾಮಗಳಿಂದ ಸಂತೆಗೆ ಬರುವ ಜನರಿಗೆ ಇದರಿಂದ ಅನುಕೂಲವಾಗಲಿದೆ.

ಜೊತೆಗೆ ಕೂಗಳತೆಯಲ್ಲಿ ಪಟ್ಟಣ ಪಂಚಾಯ್ತಿ ಕಾರ್ಯಾಲಯ ಹಾಗೂ ನಾಡಾ ಕಾರ್ಯಾಲಯ ಸಹ ಇರುವುದರಿಂದ ಸರ್ಕಾರಿ ಕಚೇರಿಗೆ ವಿವಿಧ ಕೆಲಸ, ಕಾರ್ಯಗಳಿಗೆ ಬರುವ ಜನರಿಗೆ ಹಾಗೂ ಸಾರ್ವಜನಿಕರಿಗೆ ಇದರಿಂದ ಅನುಕೂಲವಾಗುವುದರಿಂದ ಕ್ಯಾಂಟೀನ್‍ಗೆ ಈ ಸ್ಥಳವನ್ನು ಆಯ್ಕೆ ಮಾಡಿಕೊಡಲಾಗಿದೆ ಎಂದು ಮುಖ್ಯಾಧಿಕಾರಿ ಖಾಜಾಮೈನುದ್ದೀನ್ ತಿಳಿಸಿದರು.

ಹೊಸಪೇಟೆಯಲ್ಲಿ ಈಗಾಗಲೇ ಮೂರು ಕ್ಯಾಂಟೀನ್‍ಗಳಿದ್ದು, ಇನ್ನು ಪಟ್ಟಣದ ಜೊತೆಗೆ ಜಿಲ್ಲೆಯ ಕಮಲಾಪುರ, ಹರಪನಹಳ್ಳಿ, ಹಗರಿಬೊಮ್ಮನಹಳ್ಳಿ ಹಾಗೂ ಕೊಟ್ಟೂರು ಸೇರಿದಂತೆ ಒಟ್ಟು ಐದು ಕಡೆಗಳಲ್ಲಿ ಇಂದಿರಾ ಕ್ಯಾಂಟಿನ್ ಆರಂಭಿಸಲಾಗುತ್ತಿದ್ದು, ಈಗಾಗಲೇ ಟೆಂಡರ್ ಪ್ರಕ್ರಿಯೆ ಮುಗಿದಿದೆ ಎಂದು ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮನೋಹರ ಅವರು ‘ಪ್ರಜಾವಾಣಿ’ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.