ಅರಸೀಕೆರೆ: ಹೋಬಳಿ ವ್ಯಾಪ್ತಿಯಲ್ಲಿ ಸೋಮವಾರ ದಾಸಶ್ರೇಷ್ಠ ಕನಕದಾಸರ ಜಯಂತಿ ಆಚರಿಸಲಾಯಿತು. ಶಾಲಾ-ಕಾಲೇಜು, ಗ್ರಾಮ ಪಂಚಾಯಿತಿ, ನಾಡ ಕಚೇರಿ ಸೇರಿದಂತೆ ವಿವಿಧ ಸಂಘಟನೆಗಳು ಕನಕದಾಸರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.
ಉಚ್ಚಂಗಿದುರ್ಗ ಗ್ರಾಮದ ಪಾದಗಟ್ಟೆ ಬಳಿ ಕನಕದಾಸರ ಪುತ್ಥಳಿಗೆ ಪೂಜೆ ಸಲ್ಲಿಸಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು. ಪ್ರಸಾದ ವಿತರಣೆ ಮಾಡಲಾಯಿತು.
ಅರಸೀಕೆರೆ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ವೈ.ಡಿ.ಅಣ್ಣಪ್ಪ ಮಾತನಾಡಿ, 'ಕನಕದಾಸರ ಆಶಯದಂತೆ ಅವರ ತತ್ವಾದರ್ಶಗಳನ್ನು ಅಳವಡಿಸಿಕೊಂಡು ಸೌಹಾರ್ದ ಬದುಕು ನಡೆಸಬೇಕು. ಶಿಕ್ಷಣದಿಂದ ಸಮುದಾಯದ ಏಳಿಗೆ, ಅರಿತು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸಬೇಕು' ಎಂದರು.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗಂಗಮ್ಮ ರಮೇಶ್, ಉಪಾಧ್ಯಕ್ಷ ಮಡ್ರಳ್ಳಿ ಕೆಂಚಪ್ಪ, ಮುಖಂಡ ಪ್ರಶಾಂತ್ ಪಾಟೀಲ್, ರೇವಣಸಿದ್ಧೇಶ್ವರ ಗೌಡ, ಹಾಲೇಶ್, ಕಾಳಮ್ಮ, ಮಂಜಪ್ಪ, ದಾನೇಶಪ್ಪ, ದಂಡಿಯಪ್ಪ, ಯುವರಾಜ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.