ADVERTISEMENT

ಬಳ್ಳಾರಿ ನಗರದಿಂದ ಪತ್ನಿ ಲಕ್ಷ್ಮೀ ಅರುಣಾ ಸ್ಪರ್ಧೆ: ಜನಾರ್ದನರೆಡ್ಡಿ ಘೋಷಣೆ

​ಪ್ರಜಾವಾಣಿ ವಾರ್ತೆ
Published 31 ಜನವರಿ 2023, 12:27 IST
Last Updated 31 ಜನವರಿ 2023, 12:27 IST
ಜನಾರ್ದನರೆಡ್ಡಿ ಮತ್ತು ಲಕ್ಷ್ಮೀ ಅರುಣಾ
ಜನಾರ್ದನರೆಡ್ಡಿ ಮತ್ತು ಲಕ್ಷ್ಮೀ ಅರುಣಾ   

ಬಳ್ಳಾರಿ: ರಾಜ್ಯ ವಿಧಾನಸಭೆ ಚುನಾವಣೆಯ ಮೊದಲ ಅಭ್ಯರ್ಥಿಯನ್ನು ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಮಂಗಳವಾರ ಪ್ರಕಟಿಸಿದ್ದು, ಬಳ್ಳಾರಿ ನಗರ ಕ್ಷೇತ್ರದಿಂದ ಮಾಜಿ ಸಚಿವ ಜನಾರ್ದನರೆಡ್ಡಿ ಪತ್ನಿ ಲಕ್ಷ್ಮೀ ಅರುಣಾ ಕಣಕ್ಕಿಳಿಯಲಿದ್ದಾರೆ.

ಜನಾರ್ದನ ರೆಡ್ಡಿ ಇತ್ತೀಚೆಗೆ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪಿಸಿದ್ದಾರೆ. ಅಕ್ರಮ ಗಣಿಗಾರಿಕೆ ಆರೋಪಕ್ಕೆ ಒಳಗಾಗಿರುವ ರೆಡ್ಡಿ, ಸುಪ್ರೀಂ ಕೋರ್ಟ್‌ ಆದೇಶದಿಂದ ಅಖಂಡ ಬಳ್ಳಾರಿ ಜಿಲ್ಲೆ ತೊರೆದಿದ್ದು ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನೆಲೆಸಿದ್ದಾರೆ. ಬಳ್ಳಾರಿ ಜಿಲ್ಲೆಯಲ್ಲಿ ಪತ್ನಿ ಲಕ್ಷ್ಮೀ ಅರುಣಾ ಪಕ್ಷ ಸಂಘಟನೆಯಲ್ಲಿ ತೊಡಗಿದ್ದಾರೆ.

ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರವನ್ನು ಸದ್ಯ ಜನಾರ್ದನರೆಡ್ಡಿ ಸಹೋದರ ಜಿ. ಸೋಮಶೇಖರ ರೆ್ಡ್ಡಿ ಪ್ರತಿನಿಧಿಸಿದ್ದಾರೆ. 2018ರ ಚುನಾವಣೆಯಲ್ಲಿ ಬಿಜೆಪಿಯಿಂದ ಆಯ್ಕೆಯಾದ ಸೋಮಶೇಖರ ರೆಡ್ಡಿ ಈ ಸಲವೂ ಬಿಜೆಪಿಯಿಂದ ಸ್ಪರ್ಧಿಸುವ ಸಾಧ್ಯತೆಯಿದೆ. ಜಿಲ್ಲಾ ಉಸ್ತುವಾರಿ ಸಚಿವ ಬಿ. ಶ್ರೀರಾಮುಲು ಈಗಾಗಲೇ ಸೋಮಶೇಖರ ರೆಡ್ಡಿ ‍ಪರ ಅನಧಿಕೃತವಾಗಿ ಪ್ರಚಾರ ಆರಂಭಿಸಿದ್ದಾರೆ.

ADVERTISEMENT

ಬಳ್ಳಾರಿ ನಗರ ಕ್ಷೇತ್ರದಿಂದ ಬಿಜೆಪಿ ಹಾಗೂ ಕಾಂಗ್ರೆಸ್‌ ಅಭ್ಯರ್ಥಿಗಳು ಯಾರಾಗಬಹುದೆಂಬ ಚರ್ಚೆಗಳು ಆರಂಭವಾಗಿದ್ದು, ಉಭಯ ಪಕ್ಷಗಳೂ ತಮ್ಮ ಅಭ್ಯರ್ಥಿಗಳನ್ನು ಅಂತಿಮಗೊಳಿಸಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.