ಬಳ್ಳಾರಿ: ಜಿಲ್ಲೆಯಲ್ಲಿ ಸುವರ್ಣ ಕರ್ನಾಟಕ ರಾಜ್ಯೋತ್ಸವವನ್ನು ಸಂಭ್ರಮದಿಂದ ಶುಕ್ರವಾರ ಆಚರಿಸಲಾಯಿತು.
ನಗರದ ಮುನಿಸಿಪಲ್ ಕಾಲೇಜು ಮೈದಾನದಲ್ಲಿ ಜಿಲ್ಲಾಡಳಿತದಿಂದ ಹಮ್ಮಿಕೊಂಡಿದ್ದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಮೊದಲಿಗೆ ಕನ್ನಡಾಂಬೆಗೆ ಪುಷ್ಪನಮನ ಸಲ್ಲಿಸಿ, ಬಳಿಕ ಧ್ವಜಾರೋಹಣ ನೆರವೇರಿಸಿದರು. ಪೊಲೀಸ್ ಪಡೆಯಿಂದ ಗೌರವಂದನೆ ಸ್ವೀಕರಿಸಿದರು.
ಹಂಪಿಯಿಂದ ಕನ್ನಡ ಸಂಘಟನೆಗಳು ತಂದಿದ್ದ ಕನ್ನಡ ಜ್ಯೋತಿ ಹಸ್ತಾಂತರ ಮಾಡಲಾಯಿತು. ಬಳಿಕ ಸಚಿವ ಬೈರೇಗೌಡ ರಾಜ್ಯೋತ್ಸವದ ಶುಭಾಶಯ ಕೋರಿದರು..
'ನಾನು ಕೋಲಾರ ಮೂಲದವನು. ಬಳ್ಳಾರಿಗೆ ಬಂದು ಧ್ವಜಾರೋಹಣ ಮಾಡುತ್ತಿರುವುದು ನನ್ನ ಪುಣ್ಯ. ಜಾತಿ, ಮತ, ಪ್ರದೇಶ ಮೀರಿ ನಾವೆಲ್ಲರೂ ಕನ್ನಡಿಗರೂ ಎಂಬ ಭಾವನೆ ಪ್ರಬಲವಾಗಬೇಕು' ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ನಗರ ಶಾಸಕ ನಾರಾ ಭರತ್ ರೆಡ್ಡಿ, ಮಹಾಪೌರ ನಂದೀಶ್ ಕುಮಾರ್, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಬಳ್ಳಾರಿ ವಲಯ ಪೊಲೀಸ್ ಮಹಾ ನೀರಿಕ್ಷಕ ಬಿ.ಎಸ್.ಲೋಕೇಶ್ ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭರಾಣಿ.ವಿ.ಜೆ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಹೆಚ್ಚುವರಿ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರ, ವಿವಿಧ ಶಾಲೆ ಕಾಲೇಜುಗಳು ವಿದ್ಯಾರ್ಥಿಗಳು ಭಾಗಿಯಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.