ADVERTISEMENT

ಕುರುಗೋಡು: ಬಸ್ ತಡೆದು ವಿದ್ಯಾರ್ಥಿಗಳ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 15 ಜುಲೈ 2024, 15:06 IST
Last Updated 15 ಜುಲೈ 2024, 15:06 IST
ಕುರುಗೋಡು ತಾಲ್ಲೂಕಿನ ಬಾದನಹಟ್ಟಿ ಗ್ರಾಮದಲ್ಲಿ ವಿದ್ಯಾರ್ಥಿಗಳು ಸೋಮವಾರ ಬಸ್ ತಡೆದು ಪ್ರತಿಭಟನೆ ನಡೆಸಿದರು
ಕುರುಗೋಡು ತಾಲ್ಲೂಕಿನ ಬಾದನಹಟ್ಟಿ ಗ್ರಾಮದಲ್ಲಿ ವಿದ್ಯಾರ್ಥಿಗಳು ಸೋಮವಾರ ಬಸ್ ತಡೆದು ಪ್ರತಿಭಟನೆ ನಡೆಸಿದರು   

ಕುರುಗೋಡು: ಸಮಯಕ್ಕೆ ಸರಿಯಾಗಿ ಬಸ್ ಸಂಚರಿಸುವಂತೆ ವ್ಯವಸ್ಥೆ ಮಾಡುವಂತೆ ಒತ್ತಾಯಿಸಿ ತಾಲ್ಲೂಕಿನ ಬಾದನಹಟ್ಟಿ ಗ್ರಾಮದಲ್ಲಿ ವಿದ್ಯಾರ್ಥಿಗಳು ಸೋಮವಾರ ಬಸ್ ತಡೆದು ಪ್ರತಿಭಟನೆ ನಡೆಸಿದರು.

ವಿದ್ಯಾರ್ಥಿಗಳು ನಿತ್ಯ ಅನುಭವಿಸುತ್ತಿರುವ ಸಮಸ್ಯೆ ಕುರಿತು ಅನೇಕಬಾರಿ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪಿಯುಸಿ, ಪದವಿ, ಡಿಪ್ಲೊಮಾ, ಎಂಜಿನಿಯರಿಂಗ್ ಮತ್ತು ಸ್ನಾತಕೋತ್ತರ ಪದವಿ ಕಾಲೇಜುಗಳಿಗೆ ಗ್ರಾಮದಿಂದ ನಿತ್ಯ ನೂರಾರು ವಿದ್ಯಾರ್ಥಿಗಳು ಬಳ್ಳಾರಿ ನಗರಕ್ಕೆ ತೆರಳುತ್ತಾರೆ. ಅವರಿಗೆ ಬೆಳಿಗ್ಗೆ ಸಮಯಕ್ಕೆ ಸರಿಯಾಗಿ ಸಬ್ ಸೌಲಭ್ಯ ಇಲ್ಲದ ಕಾರಣ ಪ್ರತಿದಿನ ಮೊದನೇ ತರಗತಿಯಿಂದ ವಂಚಿತರಾಗುತ್ತಿದ್ದಾರೆ. ಈ ಬಗ್ಗೆ ಅನೇಕಬಾರಿ ಸಾರಿಗೆ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಅನಿವಾರ್ಯವಾಗಿ ಬಸ್ ಪಡೆದು ಪ್ರತಿಭಟನೆ ಮಾಡಬೇಕಾಯಿತು. ಸೌಲಭ್ಯ ಕಲ್ಪಿಸದಿದ್ದರೆ ಹೋರಾಟ ತೀವ್ರಗೊಳಿಸಬೇಕಾಗುತ್ತದೆ ಎಂದು ವಿದ್ಯಾರ್ಥಿಗಳು ಎಚ್ಚರಿಸಿದರು.

ADVERTISEMENT

ಹೋರಾಟಗಾರರಿಂದ ಮನವಿ ಸ್ವೀಕರಿಸಿದ ಬಸ್ ನಿಲ್ದಾಣದ ನಿಯಂತ್ರಣಾಧಿಕಾರಿ ಚನ್ನಪ್ಪ ಅವರು, ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಸಕಾಲಕ್ಕೆ ಬಸ್ ಸೇವೆ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದ ನಂತರ ವಿದ್ಯಾರ್ಥಿಗಳು ಪ್ರತಿಭಟನೆ ಹಿಂದಕ್ಕೆ ಪಡೆದರು.

ವಿದ್ಯಾರ್ಥಿಗಳಾದ ಗಾಳಿ ಸಂದೀಪ್, ನಾಗರಾಜ, ಶಿವಕುಮಾರ್, ಹೊನ್ನಶ್ರೀ, ಸೋಮಶೇಖರ್, ಅಂಜಿನಿ, ಮೋನಿಕಾ, ನಂದಿನಿ, ಗಾದಿಲಿಂಪ್ಪ, ಕರಿಬಸವ, ಗಾಳಿ ಸುದೀಪ್, ಬಸವರಾಜ, ಜಡೇಶ, ಓಂಕಾರ, ,ರಾಧಿಕಾ, ರಂಜಿತಾ, ನಂದೀಶ, ಪಾಂಡುರಂಗ, ಕಲ್ಲೇಶ ಮತ್ತು ಕಾರ್ತಿಕ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.