ADVERTISEMENT

ನಿಗಮ ಮಂಡಳಿ ಅಧ್ಯಕ್ಷರ ಪಟ್ಟಿ ಕಗ್ಗಂಟು: ಶಾಸಕ ಗಣೇಶ್ ಬೇಸರ

​ಪ್ರಜಾವಾಣಿ ವಾರ್ತೆ
Published 24 ಜನವರಿ 2024, 15:52 IST
Last Updated 24 ಜನವರಿ 2024, 15:52 IST
ಜೆ.ಎನ್. ಗಣೇಶ್
ಜೆ.ಎನ್. ಗಣೇಶ್   

ಕಂಪ್ಲಿ (ಬಳ್ಳಾರಿ ಜಿಲ್ಲೆ): ನಿಗಮ ಮಂಡಳಿಗಳ ಅಧ್ಯಕ್ಷರ ಪಟ್ಟಿ ಗೊಂದಲ ಕುರಿತಂತೆ ‘ಹೀಗೆ ಆಗಬಾರದಿತ್ತು’ ಎಂದು ಶಾಸಕ ಜೆ.ಎನ್.ಗಣೇಶ್ ಬೇಸರ ವ್ಯಕ್ತಪಡಿಸಿದರು.

ತಾಲ್ಲೂಕಿನ ಸಣಾಪುರ ಗ್ರಾಮದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘ನಿಗಮ ಮಂಡಳಿ ಪಟ್ಟಿಯಲ್ಲಿ ನನ್ನ ಹೆಸರು ಇದ್ದರೇನು? ಇಲ್ಲದಿದ್ದರೇನು?’ ಎಂದು ಬೇಸರ ವ್ಯಕ್ತಪಡಿಸಿದರು.

‘ಸಂಭಾವ್ಯರ ಮೊದಲ ಪಟ್ಟಿಯಲ್ಲಿ ಶಾಸಕ ಗಣೇಶ್ ಅವರಿಗೆ ‘ಖಾದಿ ನಿಗಮ’ಕ್ಕೆ ನೀಡಲಾಗುವುದು ಎಂದು ಕೇಳಿ ಬಂದಿತ್ತು. ಆ ವಿಷಯವು ಸಾಮಾಜಿಕ ಜಾಲತಾಣಗಳಲ್ಲೂ ಹರಿದಾಡಿತ್ತು. ಆದರೆ, ಶಾಸಕರು ಕೇಳಿದ ನಿಗಮ ಮಂಡಳಿ ನೀಡದಿರುವುದೇ ಈ ಅಸಮಾಧಾನಕ್ಕೆ ಕಾರಣವಿರಬಹುದು’ ಎಂದು ಹೆಸರು ಕಾಂಗ್ರೆಸ್ ಮುಖಂಡರೊಬ್ಬರು ತಿಳಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.