ಬಳ್ಳಾರಿ: ಮರಕುಂಬಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 99 ಅಪರಾಧಿಗಳಿಗೆ ಜಾಮೀನು ಮಂಜೂರಾಗಿದ್ದು, ಎಲ್ಲರನ್ನೂ ಶನಿವಾರ ಪೊಲೀಸರು ಬಿಡುಗಡೆ ಮಾಡುವರು.
‘ಭದ್ರತೆ ಮತ್ತು ₹50 ಸಾವಿರ ಬಾಂಡ್ ಅನ್ನು 99 ಮಂದಿ ಸಲ್ಲಿಸಿದ್ದರು. ಜಾಮೀನಿಗೆ ಸಂಬಂಧಿಸಿದಂತೆ ನ್ಯಾಯಾಲಯದ ಎಲ್ಲಾ ಪ್ರಕ್ರಿಯೆಗಳು ಪೂರ್ಣಗೊಂಡಿವೆ. ಕೆಳಹಂತದ ನ್ಯಾಯಾಲಯದಿಂದ ಬಿಡುಗಡೆ ಆದೇಶ ಬಂದಿದ್ದು, ಶನಿವಾರ ಬಿಡುಗಡೆ ಆಗುವರು’ ಎಂದು ಬಳ್ಳಾರಿ ಕಾರಾಗೃಹದ ಅಧೀಕ್ಷಕಿ ಲತಾ ‘ಪ್ರಜಾವಾಣಿ’ಗೆ ತಿಳಿಸಿದರು.
ಪ್ರಕರಣದ ಒಟ್ಟು 101 ಅಪರಾಧಿಗಳ ಪೈಕಿ ಒಬ್ಬ ಅಪರಾಧಿ ಶಿಕ್ಷೆ ಪ್ರಕಟವಾದ ದಿನವೇ ಮೃತಪಟ್ಟಿದ್ದ. 100 ಜನರನ್ನು ಬಳ್ಳಾರಿಯ ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿತ್ತು. ಈ ಪೈಕಿ ಪ್ರಕರಣದ ‘ಎ1’ ಆರೋಪಿ ಜಾಮೀನಿಗೆ ಅರ್ಜಿ ಸಲ್ಲಿಸಿರಲಿಲ್ಲ. ಸದ್ಯ 99 ಮಂದಿಗೆ ಜಾಮೀನು ಸಿಕ್ಕಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.