ADVERTISEMENT

ಮರಕುಂಬಿ ಪ್ರಕರಣ | ಆದೇಶ ಬಂದ ಬಳಿಕ ಬಿಡುಗಡೆ: ಕಾರಾಗೃಹ ಅಧೀಕ್ಷಕಿ ಲತಾ

​ಪ್ರಜಾವಾಣಿ ವಾರ್ತೆ
Published 14 ನವೆಂಬರ್ 2024, 15:41 IST
Last Updated 14 ನವೆಂಬರ್ 2024, 15:41 IST
<div class="paragraphs"><p>ಸಾಂದರ್ಭಿಕ ಚಿತ್ರ&nbsp;</p></div>

ಸಾಂದರ್ಭಿಕ ಚಿತ್ರ 

   

ಬಳ್ಳಾರಿ: ಮರಕುಂಬಿ ಹಿಂಸಾಚಾರ ಪ್ರಕರಣದಲ್ಲಿ ಜಾಮೀನು ಪಡೆದಿರುವ 99 ಅಪರಾಧಿಗಳ ಬಿಡುಗಡೆ ಆದೇಶ ಇನ್ನಷ್ಟೇ ಬಳ್ಳಾರಿ ಕೇಂದ್ರ ಕಾರಾಗೃಹ ಅಧಿಕಾರಿಗಳ ಕೈ ಸೇರಬೇಕಿದೆ. ಅದು ಬಂದ ಕೂಡಲೇ ಅವರನ್ನು ಬಿಡುಗಡೆ ಮಾಡಲಾಗುವುದು ಎಂದು ಕಾರಾಗೃಹದ ಅಧೀಕ್ಷಕಿ ಲತಾ ತಿಳಿಸಿದ್ದಾರೆ. 

‘ಪ್ರಜಾವಾಣಿ’ ಜತೆಗೆ ಮಾತನಾಡಿರುವ ಅವರು, ಜಾಮೀನು ಪಡೆದವರು ಕೋರ್ಟ್‌ ತಿಳಿಸಿರುವ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಬೇಕು. ಭದ್ರತೆ ಮತ್ತು ₹50 ಸಾವಿರ ಬಾಂಡ್‌ ಸಲ್ಲಿಸಬೇಕಾಗುತ್ತದೆ. ಈ ಪ್ರಕ್ರಿಯೆ ಪೂರ್ಣಗೊಂಡ ಬಳಿಕ, ಕೈದಿಗಳ ಬಿಡುಗಡೆಗೆ ಕೋರ್ಟ್‌ನಿಂದ ಆದೇಶ ಹೊರಡಿಸಲಾಗುತ್ತದೆ ಎಂದು ಅವರು ತಿಳಿಸಿದರು. 

ADVERTISEMENT

ಪ್ರಕರಣದ ಒಟ್ಟು 101 ಅಪರಾಧಿಗಳ ಪೈಕಿ ಒಬ್ಬ ಅಪರಾಧಿ ಶಿಕ್ಷೆ ಪ್ರಕಟವಾದ ದಿನವೇ ಮೃತಪಟ್ಟಿದ್ದ. ಇನ್ನು 100 ಮಂದಿಯನ್ನು ಬಳ್ಳಾರಿಯ ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿತ್ತು. ಈ ಪೈಕಿ ಪ್ರಕರಣದ ‘ಎ 1’ ಆರೋಪಿ ಜಾಮೀನಿಗೆ ಅರ್ಜಿಯನ್ನೇ ಸಲ್ಲಿಸಿರಲಿಲ್ಲ. ಸದ್ಯ 99 ಮಂದಿಗೆ ಜಾಮೀನು ಸಿಕ್ಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.