ADVERTISEMENT

ಬಳ್ಳಾರಿ | ಸಿರಿಧಾನ್ಯಗಳ ಜಾಗೃತಿ ನಡಿಗೆಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 4 ಜನವರಿ 2024, 2:37 IST
Last Updated 4 ಜನವರಿ 2024, 2:37 IST
   

ಬಳ್ಳಾರಿ: ಅಂತರರಾಷ್ಟ್ರೀಯ ಮಟ್ಟದ ಸಿರಿಧಾನ್ಯ ಮತ್ತು ಸಾವಯವ ಮೇಳ-2024ರ ಅಂಗವಾಗಿ ಕೃಷಿ ಇಲಾಖೆ ವತಿಯಿಂದ ಗುರುವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಸಿರಿಧಾನ್ಯಗಳ ಜಾಗೃತಿ ನಡಿಗೆಗೆ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಹಸಿರು ನಿಶಾನೆ ತೋರಿಸುವುದರ ಮೂಲಕ ಚಾಲನೆ ನೀಡಿದರು.

ಜಾಗೃತಿ ನಡಿಗೆಯು ಜಿಲ್ಲಾಧಿಕಾರಿಗಳ ಕಚೇರಿ ಆವರಣದಿಂದ ಆರಂಭವಾಗಿ ಹೆಚ್.ಆರ್.ಗವಿಯಪ್ಪ ವೃತ್ತ, ಎಸ್.ಪಿ.ವೃತ್ತ, ಕನಕದುರ್ಗಮ್ಮ ದೇವಸ್ಥಾನ, ಗಡಿಗಿ ಚೆನ್ನಪ್ಪ ವೃತ್ತದ ಮೂಲಕ ಮರಳಿ ಜಿಲ್ಲಾಧಿಕಾರಿಗಳ ಕಚೇರಿ ಆವರಣಕ್ಕೆ ಮರಳಿತು. ಡೊಳ್ಳು ಕುಣಿತ, ಮೆರವಣಿಗೆಯಲ್ಲಿ ವಿಶೇಷ ಆಕರ್ಷಣೆಯಾಗಿತ್ತು.

ಈ ವೇಳೆ ವಿವಿಧ ಸಂದೇಶ ಸಾರುವ ಫಲಕಗಳನ್ನು ಹಿಡಿದು ಜಾಗೃತಿ ಮೂಡಿಸಲಾಯಿತು.

ADVERTISEMENT

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಹೆಚ್ಚುವರಿ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ, ಕೃಷಿ ಜಂಟಿ ನಿರ್ದೇಶಕ ಕೆ.ಮಲ್ಲಿಕಾರ್ಜುನ ಸೇರಿದಂತೆ ಕೃಷಿ ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ,ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.