ಹೊಸಪೇಟೆ: ‘ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರನ್ನು ಹೊರಗಿಟ್ಟು ಕಾಂಗ್ರೆಸ್–ಜೆಡಿಎಸ್‌ನಾಯಕರು ರಾಜ್ಯದ 15 ಕ್ಷೇತ್ರಗಳಲ್ಲಿ ನಡೆಯುತ್ತಿರುವ ಉಪಚುನಾವಣೆಯಲ್ಲಿ ಒಳ ಒಪ್ಪಂದ ಮಾಡಿಕೊಂಡಿದ್ದಾರೆ’ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಹೇಳಿದರು.
ಸೋಮವಾರ ಸಂಜೆ ಇಲ್ಲಿ ನಡೆದ ಬಿಜೆಪಿ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ‘ಸಿದ್ದರಾಮಯ್ಯನವರನ್ನು ಹೊರಗಿಟ್ಟು ಸರ್ಕಾರ ರಚಿಸಲು ಎರಡೂ ಪಕ್ಷಗಳ ಮುಖಂಡರು ಪ್ರಯತ್ನಿಸುತ್ತಿದ್ದಾರೆ. ಒಂದು ವೇಳೆ ಸರ್ಕಾರ ರಚಿಸಿದರೂ ಸಿದ್ದರಾಮಯ್ಯನವರು ಪುನಃ ಅದನ್ನು ಕೆಡವುತ್ತಾರೆ’ ಎಂದರು.
ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿಯಿಂದಅಪಮಾನ
‘ಕಾವಿ ಧರಿಸಿ, ಗಡ್ಡ ಬಿಟ್ಟುಕೊಂಡು ಓಡಾಡುತ್ತಿರುವ ಶ್ರೀರಾಮುಲು ಯಾವ ಸೀಮೆಯ ನಾಯಕ ಎಂದು ಜೆಡಿಎಸ್‌ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ನನ್ನನ್ನು ಟೀಕಿಸಿದ್ದಾರೆ. ಸಂಸ್ಕಾರ ಎಂಬುದು ಮನುಷ್ಯನ ಅಂತರಾಳದಲ್ಲಿ ಇರುತ್ತದೆ ಎನ್ನುವುದು ಅವರಿಗೆ ಗೊತ್ತಿಲ್ಲ. ನನ್ನನ್ನು ಆ ರೀತಿ ಮೂದಲಿಸುವ ಮೂಲಕ ಕಾವಿ ಧರಿಸಿರುವ ಸಿದ್ದಗಂಗಾ ಸ್ವಾಮೀಜಿ, ಸುತ್ತೂರು ಸ್ವಾಮೀಜಿ, ಆದಿಚುಂಚನಗಿರಿಯ ನಿರ್ಮಲಾನಂದನಾಥ ಸ್ವಾಮೀಜಿ ಅವರನ್ನು ಅಪಮಾನ ಮಾಡಿದ್ದಾರೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.