ADVERTISEMENT

‘ಒಂದು ನಿಲ್ದಾಣ, ಒಂದು ಉತ್ಪನ್ನ’ ಮಳಿಗೆಗೆ ಮೋದಿ ಚಾಲನೆ

​ಪ್ರಜಾವಾಣಿ ವಾರ್ತೆ
Published 12 ಮಾರ್ಚ್ 2024, 16:27 IST
Last Updated 12 ಮಾರ್ಚ್ 2024, 16:27 IST

ಬಳ್ಳಾರಿ: ಬಳ್ಳಾರಿ ರೈಲ್ವೆ ನಿಲ್ದಾಣದಲ್ಲಿನ ನೂತನ ‘ಒಂದು ನಿಲ್ದಾಣ, ಒಂದು ಉತ್ಪನ್ನ’ ಮಳಿಗೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ವರ್ಚುವಲ್‌ ಮೂಲಕ ಚಾಲನೆ ನೀಡಿದರು.

ರೈಲ್ವೆ ಇಲಾಖೆಯ ಸುಮಾರು ₹85 ಸಾವಿರ ಕೋಟಿಗೂ ಅಧಿಕ ಮೊತ್ತದ ವಿವಿಧ ಯೋಜನೆಗಳಿಗೂ ಶಂಕುಸ್ಥಾಪನೆ ನೆರವೇರಿಸಿದರು. 10 ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೂ ಅವರು ಚಾಲನೆ ನೀಡಿದರು. 

ಬಳ್ಳಾರಿಯ ರೈಲ್ವೆ ನಿಲ್ದಾಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲಿಕೆಯ ಮೇಯರ್ ಬಿ.ಶ್ವೇತಾ ಭಾಗವಹಿಸಿದ್ದರು.

ADVERTISEMENT

ಬಳಿಕ ಮಾತನಾಡಿದ ಅವರು, ಕೇಂದ್ರ ಸರ್ಕಾರದ ರೈಲ್ವೆ ಸಚಿವಾಲಯವು ಸ್ಥಳೀಯ ಉತ್ಪನ್ನಗಳಿಗೆ ಉತ್ತೇಜನ ನೀಡುವ ಉದ್ದೇಶ ಹೊಂದಿದೆ. ಉತ್ಪನ್ನಗಳನ್ನು ಮಾರಾಟ ಮಾಡಲು ಮಳಿಗೆ ಒದಗಿಸುವ ನಿಟ್ಟಿನಲ್ಲಿ ‘ಒಂದು ನಿಲ್ದಾಣ ಒಂದು ಉತ್ಪನ್ನ’ ಮಳಿಗೆಯನ್ನು ಬಳ್ಳಾರಿ ನಿಲ್ದಾಣದಲ್ಲಿ ಆರಂಭಿಸಲಾಗಿದೆ’ ಎಂದರು.

ಬಳ್ಳಾರಿ ರೈಲ್ವೇ ನಿಲ್ದಾಣದಲ್ಲಿ ಈ ಯೋಜನೆಯಡಿ ಸಂಡೂರು ಕರಕುಶಲ ಕೇಂದ್ರದ ಲಂಬಾಣಿ ಕಸೂತಿ ಕಲೆಯ ಉತ್ಪನ್ನಗಳ ನೂತನ ಮಳಿಗೆಯನ್ನು ಸಂಸದ ವೈ.ದೇವೇಂದ್ರಪ್ಪ ಅವರು ಮಂಗಳವಾರ ಉದ್ಘಾಟಿಸಿದರು.

ಹುಬ್ಬಳ್ಳಿ ವಲಯ ರೈಲ್ವೆ ಬಳಕೆದಾರರ ಸಲಹಾ ಸಮಿತಿ ಸದಸ್ಯ ರವಿಕುಮಾರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.