ಕಂಪ್ಲಿ: ತಾಲ್ಲೂಕಿನ ದೇವಸಮುದ್ರ ಗ್ರಾಮದ ಆಶ್ರಯ ಕಾಲೊನಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ‘ನಮ್ಮ ಶಾಲೆ ನಮ್ಮ ಹೆಮ್ಮೆ’ ಪ್ರಶಸ್ತಿ ಪಡೆದುಕೊಂಡಿದೆ.
ಪ್ರಸ್ತುತ ಶಾಲೆಯ ಆಡಳಿತ ನಿರ್ವಹಣೆ, ಪ್ರಗತಿ, ಉತ್ತಮ ಪರಿಸರ ಮತ್ತು ವಿಶೇಷವಾಗಿ ಮಕ್ಕಳ ಸರ್ವತೋಮುಖ ಬೆಳವಣಿಗೆ, ಪಠ್ಯೇತರ ಚಟುವಟಿಕೆಗಳನ್ನು ಪರಿಗಣಿಸಿ ಬೆಂಗಳೂರಿನ ಕರ್ನಾಟಕ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್, ಸೂರ್ಯ ಫೌಂಡೇಶನ್ ಮತ್ತು ಸ್ಪರ್ಕ ಅಕಾಡೆಮಿ ಆಯ್ಕೆ ಮಾಡಿದೆ.
ಬೆಂಗಳೂರಿನಲ್ಲಿ ಮಂಗಳವಾರ ನಡೆದ ರಾಜ್ಯ ಮಟ್ಟದ ಶೈಕ್ಷಣಿಕ ಸಮ್ಮೇಳನದಲ್ಲಿ ಹಾಲಿ ಶಾಲೆಯ ಮುಖ್ಯ ಶಿಕ್ಷಕ ಎಚ್. ಜಡೆಪ್ಪ ಅವರಿಗೆ ಸಂಘಟಕರು ರಾಜ್ಯಮಟ್ಟದ ನಮ್ಮ ಶಾಲೆ ನಮ್ಮ ಹೆಮ್ಮೆ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ.
ಎಸ್.ಡಿ.ಎಂ.ಸಿ ಅಧ್ಯಕ್ಷ ಕರಿಯಪ್ಪ, ಪ್ರಮುಖ ಬಸವರಾಜ, ಶಿಕ್ಷಕ ವೃಂದದವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.