ಹೊಸಪೇಟೆ (ವಿಜಯನಗರ): ತಾಲ್ಲೂಕು ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘದಿಂದ ರಾಷ್ಟ್ರೀಯ ಸ್ವಚ್ಛತಾ ದಿನ ಸೋಮವಾರ ನಗರದ ನ್ಯಾಯಾಲಯದ ಆವರಣದಲ್ಲಿ ಆಚರಿಸಲಾಯಿತು.
ಕಾರ್ಯಕ್ರಮದ ಅಂಗವಾಗಿ ನ್ಯಾಯಾಧೀಶರು, ವಕೀಲರು ನ್ಯಾಯಾಲಯದ ಆವರಣದಲ್ಲಿ ಸ್ವಚ್ಛತಾ ಕಾರ್ಯ ಕೈಗೊಂಡರು. ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಅಬ್ದುಲ್ ರಹೀಮಾನ್ ಎ. ನಂದಗಡಿ ಕಾರ್ಯಕ್ರಮ ಉದ್ಘಾಟಿಸಿ, ನಾವೆಲ್ಲರೂ ಸ್ವಚ್ಛತೆಗೆ ಆದ್ಯತೆ ಕೊಡಬೇಕು. ಕಲುಷಿತ ವಾತಾವರಣದಿಂದ ಅನಾರೋಗ್ಯಕ್ಕೆ ಕಾರಣವಾಗುತ್ತದೆ. ಹಾಗಾಗಿ ಪ್ರತಿಯೊಬ್ಬರೂ ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು ಎಂದು ಹೇಳಿದರು.
ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶೆ ಹೇಮಲತಾ ಬಿ. ಹುಲ್ಲೂರ, ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಮೇಶ್ ಬಾಬು ಬಿ.ಎನ್., ಪ್ರಧಾನ ಸಿವಿಲ್ ನ್ಯಾಯಾಧೀಶ ಕಿಶನ್ ಬಿ.ಮಾಡಲಗಿ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ತೃಪ್ತಿ ಧರಣಿ, 2ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಸಂಜೀವಕುಮಾರ ಜಿ., 3ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಚೈತ್ರ ಜೆ., ವಕೀಲರ ಸಂಘದ ಅಧ್ಯಕ್ಷ ಕೆ.ವಿ.ಬಸವರಾಜ, ಪ್ರಧಾನ ಕಾರ್ಯದರ್ಶಿ ಎ.ಕರುಣಾನಿಧಿ, ಆಡಳಿತ ಸಹಾಯಕ ಎಸ್.ಬಿ. ಕಮತಗಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.