ADVERTISEMENT

ಯೇಸು ಮೂರ್ತಿ ಪ್ರತಿಷ್ಠಾಪನೆಗೆ ವಿರೋಧ

​ಪ್ರಜಾವಾಣಿ ವಾರ್ತೆ
Published 2 ಜನವರಿ 2020, 13:09 IST
Last Updated 2 ಜನವರಿ 2020, 13:09 IST
ಹಿಂದೂ ಜಾಗರಣ ವೇದಿಕೆಯ ಪದಾಧಿಕಾರಿಗಳು ಗುರುವಾರ ಹೊಸಪೇಟೆಯಲ್ಲಿ ತಹಶೀಲ್ದಾರ್‌ ಎಚ್‌. ವಿಶ್ವನಾಥ್‌ ಅವರಿಗೆ ಮನವಿ ಪತ್ರ ಸಲ್ಲಿಸಿದರು
ಹಿಂದೂ ಜಾಗರಣ ವೇದಿಕೆಯ ಪದಾಧಿಕಾರಿಗಳು ಗುರುವಾರ ಹೊಸಪೇಟೆಯಲ್ಲಿ ತಹಶೀಲ್ದಾರ್‌ ಎಚ್‌. ವಿಶ್ವನಾಥ್‌ ಅವರಿಗೆ ಮನವಿ ಪತ್ರ ಸಲ್ಲಿಸಿದರು   

ಹೊಸಪೇಟೆ: ಕನಕಪುರದ ಕಪಾಲ ಬೆಟ್ಟದಲ್ಲಿ ಯೇಸು ಮೂರ್ತಿ ಪ್ರತಿಷ್ಠಾಪಿಸುವುದಕ್ಕೆ ಅವಕಾಶ ಕಲ್ಪಿಸಬಾರದು ಎಂದು ಹಿಂದೂ ಜಾಗರಣ ವೇದಿಕೆ ಆಗ್ರಹಿಸಿದೆ.

ಈ ಸಂಬಂಧ ವೇದಿಕೆಯ ಪದಾಧಿಕಾರಿಗಳು ಗುರುವಾರ ನಗರದಲ್ಲಿ ತಹಶೀಲ್ದಾರ್‌ ಎಚ್‌. ವಿಶ್ವನಾಥ್‌ ಅವರಿಗೆ ಮನವಿ ಪತ್ರ ಸಲ್ಲಿಸಿದರು.

‘ಬೆಟ್ಟ ಹಿಂದೂಗಳಿಗೆ ಸೇರಿದ ಸ್ಥಳವಾಗಿದೆ. ಕಾಲಭೈರವನ ಆವಾಸಸ್ಥಾನವಾಗಿದೆ. ಪ್ರತಿವರ್ಷ ಮುನೇಶ್ವರ ಸ್ವಾಮಿ ಜಾತ್ರೆ ನಡೆಯುವ ಪುಣ್ಯಭೂಮಿ. ಅಂತಹ ಪವಿತ್ರ ಸ್ಥಳ ಮತಾಂತರಿಗಳಾದ ಕ್ರೈಸ್ತರಿಗೆ ಕೊಟ್ಟು, ಹಿಂದೂಗಳಿಗೆ ಅಪಮಾನಿಸುವುದು ಸರಿಯಲ್ಲ’ ಎಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

ADVERTISEMENT

‘ಕ್ರೈಸ್ತರ ಓಲೈಕೆಗಾಗಿ ಕಾಂಗ್ರೆಸ್‌ ಮುಖಂಡ ಡಿ.ಕೆ. ಶಿವಕುಮಾರ ಅವರು ಬಹುಸಂಖ್ಯಾತರಿಗೆ ಅಪಮಾನ ಮಾಡುತ್ತಿರುವುದು ಸರಿಯಲ್ಲ. ಸರ್ಕಾರ ಯಾವುದೇ ಕಾರಣಕ್ಕೂ ಆ ಜಾಗ ಕ್ರೈಸ್ತರಿಗೆ ಕೊಡಬಾರದು’ ಎಂದು ಒತ್ತಾಯಿಸಿದ್ದಾರೆ.

ವೇದಿಕೆಯ ಬಳ್ಳಾರಿ ವಿಭಾಗದ ಪ್ರಧಾನ ಕಾರ್ಯದರ್ಶಿ ಮೌನೇಶ್‌ ಬಡಿಗೇರ್‌, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನವೀನ್‌ ಕುಮಾರ್‌, ಮುಖಂಡರಾದ ಸಿದ್ದೇಶ್‌ ಪೂಜಾರ್‌, ಹುಲುಗಪ್ಪ, ರಾಜು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.