ADVERTISEMENT

ಬಳ್ಳಾರಿ: ಇಂಜಿನಿಯರಿಂಗ್ ಕಾಲೇಜು ಶುಲ್ಕ ಹೆಚ್ಚಳಕ್ಕೆ ವಿರೋಧ 

​ಪ್ರಜಾವಾಣಿ ವಾರ್ತೆ
Published 15 ಜೂನ್ 2024, 15:59 IST
Last Updated 15 ಜೂನ್ 2024, 15:59 IST
ಕಂಬಳಿ ಮಂಜುನಾಥ
ಕಂಬಳಿ ಮಂಜುನಾಥ   

ಬಳ್ಳಾರಿ: ಖಾಸಗಿ ಎಂಜಿನಿಯರಿಂಗ್‌ ಕಾಲೇಜುಗಳಲ್ಲಿ ಶುಲ್ಕ ಹೆಚ್ಚಳವಾಗಿರುವುದಕ್ಕೆ ವಿದ್ಯಾರ್ಥಿ ಸಂಘಟನೆ ಎಐಡಿಎಸ್‌ಒ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. 

ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಕಂಬಳಿ ಮಂಜುನಾಥ ಈ ಕುರಿತು ಹೇಳಿಕೆ ಬಿಡುಗಡೆ ಮಾಡಿದ್ದು, ‘ಖಾಸಗಿ ಕಾಲೇಜುಗಳ ಸರ್ಕಾರಿ ಕೋಟಾದಲ್ಲಿ ₹96,574 ಗಳಿಂದ ₹1,06,231 ವರೆಗೆ ಶುಲ್ಕ ಏರಿಸಲಾಗಿದೆ. ಟೈಪ್-1 ಕಾಲೇಜುಗಳಲ್ಲಿ ₹1.69 ಲಕ್ಷಗಳಿಂದ ₹1.86ಲಕ್ಷದ ವರೆಗೆ ಹಾಗೂ ಟೈಪ್-2 ಕಾಲೇಜುಗಳಲ್ಲಿ ₹2.37 ಲಕ್ಷಗಳಿಂದ ₹2.61 ಲಕ್ಷಗಳವರೆಗೆ ಶುಲ್ಕ ಏರಿಸಲಾಗಿದೆ’ ಎಂದು ಹೇಳಿದ್ದಾರೆ. 

ಖಾಸಗಿ ಕಾಲೇಜುಗಳು ಈಗಾಗಲೇ ಮ್ಯಾನೇಜ್‌ಮೆಂಟ್‌ ಕೋಟಾ ಅಡಿಯಲ್ಲಿ ಬರುವ ಸೀಟುಗಳ ಶುಲ್ಕವನ್ನು ಮನಸೋಇಚ್ಛೆ ಏರಿಸುತ್ತಿವೆ. ಬೆಂಗಳೂರಿನ ಕಾಲೇಜು ಒಂದರಲ್ಲಿ ಮ್ಯಾನೇಜ್ಮೆಂಟ್ ಸೀಟಿನ ಶುಲ್ಕ ₹26 ಲಕ್ಷದಷ್ಟಿದೆ. ಇಂತಹ ಸಂದರ್ಭದಲ್ಲಿ, ಸರ್ಕಾರದ ನಿಯಂತ್ರಣದಡಿ ಬರುವ ಸೀಟುಗಳ  ಶುಲ್ಕವನ್ನಾದರೂ ಸರ್ಕಾರ ನಿಯಂತ್ರಿಸಬೇಕಿತ್ತು’ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. 

ADVERTISEMENT

‘ಶೈಕ್ಷಣಿಕ ಶುಲ್ಕ ಏರಿಸಲು, ಶಿಕ್ಷಣವನ್ನು ಸಂಪೂರ್ಣವಾಗಿ ವ್ಯಾಪಾರೀಕರಣ ಮಾಡಲು ಸರ್ಕಾರವೇ ಅನುಮತಿ ನೀಡುತ್ತಿದೆ. ಇದು ಅತ್ಯಂತ ಬೇಸರದ ಸಂಗತಿ . ಇದೀಗ, ಖಾಸಗಿ ಕಾಲೇಜುಗಳಲ್ಲಿ ಇಂಜಿನಿಯರಿಂಗ್ ಶಿಕ್ಷಣವೆಂಬುದು  ಮಧ್ಯಮ ವರ್ಗದ ಕುಟುಂಬಗಳಿಗೆ ಮರೀಚಿಕೆಯಾಗಿದೆ. ಪ್ರತಿ ವರ್ಷ ಶುಲ್ಕ ಏರಿಕೆ ನಡೆದರೆ, ಮುಂದಿನ ದಿನಗಳಲ್ಲಿ ಮಧ್ಯಮ ವರ್ಗದ ವಿದ್ಯಾರ್ಥಿಗಳು ಖಾಸಗಿ ಕಾಲೇಜುಗಳಲ್ಲಿ ಇಂಜಿನಿಯರಿಂಗ್ ಸೇರುವುದು ಸಾಧ್ಯವಾಗುವುದಿಲ್ಲ. ಸರ್ಕಾರ ತನ್ನ ನಿರ್ಧಾರವನ್ನು ಹಿಂಪಡೆಯಬೇಕೆಂದು’ ಆಗ್ರಹಿಸಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.