ADVERTISEMENT

ತೆಕ್ಕಲಕೋಟೆ | ಮಳೆಗೆ ಮನೆ ಹಾನಿ: ತಹಶೀಲ್ದಾರ್ ಭೇಟಿ

​ಪ್ರಜಾವಾಣಿ ವಾರ್ತೆ
Published 12 ಜೂನ್ 2024, 14:43 IST
Last Updated 12 ಜೂನ್ 2024, 14:43 IST
ತೆಕ್ಕಲಕೋಟೆ ಪಟ್ಟಣದಲ್ಲಿ ಮಳೆಯಿಂದ ಹಾನಿಗೊಳಗಾದ ಮನೆಗಳಿಗೆ ತಹಶೀಲ್ದಾರ್ ಭೇಟಿ ನೀಡಿದರು
ತೆಕ್ಕಲಕೋಟೆ ಪಟ್ಟಣದಲ್ಲಿ ಮಳೆಯಿಂದ ಹಾನಿಗೊಳಗಾದ ಮನೆಗಳಿಗೆ ತಹಶೀಲ್ದಾರ್ ಭೇಟಿ ನೀಡಿದರು   

ತೆಕ್ಕಲಕೋಟೆ: ಪಟ್ಟಣದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಗೆ ಹಾನಿಗೊಳಗಾದ ಮನೆಗಳಿಗೆ ಸಿರುಗುಪ್ಪ ತಹಶೀಲ್ಡಾರ್ ಎಚ್.ವಿಶ್ವನಾಥ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

9ನೇ ವಾರ್ಡ್‌ನ ರಾಮಲಿಂಗಮ್ಮ ಇವರ ಮನೆ ಹಾಗೂ 12ನೇ ವಾರ್ಡ್‌ನ ನಿವಾಸಿ ಶೇಕಪ್ಪ ಅಂಬಮ್ಮ ಅವರ ಮನೆಯ ಚಾವಣಿ ಕುಸಿದಿದ್ದು, ಕಂದಾಯ ನಿರೀಕ್ಷಕ ಹಾಗೂ ಗ್ರಾಮ ಲೆಕ್ಕಾಧಿಕಾರಿ ನೀಡಿದ ವರದಿ ಬಳಿಕ ತಹಶೀಲ್ದಾರ್ ಖುದ್ದು ಭೇಟಿ ನೀಡಿ ಪರಿಶೀಲಿಸಿದರು.

‘ಮಳೆಯಿಂದ ಹಾನಿಗೊಳಗಾದ ಮನೆಗಳ ವಾಸ್ತವಿಕ ಸ್ಥಿತಿಗತಿಯ ಆಧಾರದ ಮೇಲೆ ಪರಿಹಾರ ನಿಗದಿ ಆಗುತ್ತದೆ. ಫಲಾನುಭವಿಗಳಿಗೆ ಸರಿಯಾದ ಪರಿಹಾರ ನೀಡುವ ಉದ್ದೇಶದಿಂದ ಭೇಟಿ ನೀಡಲಾಗಿದೆ’ ಎಂದು ತಹಶೀಲ್ದಾರ್ ಎಚ್.ವಿಶ್ವನಾಥ ತಿಳಿಸಿದರು.

ADVERTISEMENT

ಈ ಸಂದರ್ಭದಲ್ಲಿ ಕಂದಾಯ ನಿರೀಕ್ಷಕ ಸುರೇಶ್ ಬಾಬು, ಗ್ರಾಮ ಲೆಕ್ಕಾಧಿಕಾರಿ ಶಿವರಾಜ ಪರಿಶೀಲನೆ ನಡೆಸಿದರು.

ತೆಕ್ಕಲಕೋಟೆ ಪಟ್ಟಣದಲ್ಲಿ ಮಳೆಯಿಂದ ಹಾನಿಗೊಳಗಾದ ಮನೆಗಳಿಗೆ ತಹಶೀಲ್ದಾರ್ ಭೇಟಿ ನೀಡಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.