ಬಳ್ಳಾರಿ: ಜಿಲ್ಲೆಯಾದ್ಯಂತ ಬುಧವಾರ ಮುಂಜಾನೆಯಿಂದ ಮಧ್ಯಾಹ್ನದವರೆಗೆ ಜಿಟಿಜಿಟಿ ಮಳೆ ಸುರಿಯಿತು. ಮಧ್ಯಾಹ್ನದ ಬಳಿಕ ಮಳೆ ನಿಂತಿತಾದರೂ, ಮೋಡಕವಿದ ವಾತಾವರಣ ಮುಂದುವರಿದಿತ್ತು.
ದಟ್ಟ ಮೋಡ, ಬಿಟ್ಟೂ ಬಿಡದೇ ನಿರಂತರವಾಗಿ ಸುರಿದ ಮಳೆಯಿಂದಾಗಿ ಜನಜೀವನ ಅಸ್ತವ್ಯವಸ್ತಗೊಂಡಿತ್ತು. ಜನ ಮನೆಗಳಿಂದ ಹೊರ ಬರಲು ಅಂಜಿದರು.
ಸದ ಗಿಜಿಗುಡುತ್ತಿದ್ದ ರಸ್ತೆಗಳಲ್ಲಿ ಜನಸಂದಣಿ ಕಡಿಮೆಯಿತ್ತು. ಬೇಸಿಗೆಯಲ್ಲಿ 45 ಡಿಗ್ರಿ ತಾಪಮಾನ ಕಾಣುವ ಜಿಲ್ಲೆಯಲ್ಲಿ ಬುಧವಾರ ಮಲೆನಾಡಿನಂಥ ವಾತಾವರಣ ಸೃಷ್ಟಿಯಾಗಿತ್ತು.
ರಸ್ತೆಗಳಲ್ಲಿ ನೀರು ನಿಂತಿದ್ದರಿಂದ ವಾಹನ ಸಂಚಾರಕ್ಕೆ ಅಡಚಣೆಯುಂಟಾಯಿತು.
ಕಳೆದ ಮೂರ್ನಾಲ್ಕು ದಿನಗಳಿಂದಲೂ ಮೋಡಕವಿದ ವಾತಾವರಣ ಕಂಡಿರುವ ಬಳ್ಳಾರಿ ಜಿಲ್ಲೆಯಲ್ಲಿ ಸೂರ್ಯ ದರ್ಶನಕ್ಕಾಗಿ ಜನ ಎದುರುನೋಡುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.