ADVERTISEMENT

ಬಳ್ಳಾರಿ |' 13 ರಂದು ರಾಷ್ಟ್ರೀಯ ಲೋಕ ಅದಾಲತ್'

ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಅವಕಾಶ: ನ್ಯಾ.ಕೆ.ಜಿ.ಶಾಂತಿ

​ಪ್ರಜಾವಾಣಿ ವಾರ್ತೆ
Published 7 ಜುಲೈ 2024, 16:04 IST
Last Updated 7 ಜುಲೈ 2024, 16:04 IST
ಕೆ.ಜಿ.ಶಾಂತಿ
ಕೆ.ಜಿ.ಶಾಂತಿ   

ಬಳ್ಳಾರಿ: ‘ಜಿಲ್ಲೆಯಲ್ಲಿ ಜುಲೈ 13ರಂದು ರಾಷ್ಟ್ರೀಯ ಲೋಕ್ ಅದಾಲತ್ ಹಮ್ಮಿಕೊಂಡಿದ್ದು, ಸಾರ್ವಜನಿಕರು, ಪಕ್ಷಕಾರರು ತಮ್ಮ ವ್ಯಾಜ್ಯಗಳನ್ನು ಪರಸ್ಪರ ರಾಜೀ ಸಂಧಾನ ಮಾಡಿಕೊಳ್ಳುವ ಮೂಲಕ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಿಕೊಳ್ಳಬಹುದು‘ ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ಕೆ.ಜಿ.ಶಾಂತಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ತಮಗಾಗುವ ಆರ್ಥಿಕ ಹೊರೆ ಹಾಗೂ ಸಮಯ ಪೋಲಾಗುವುದನ್ನು ತಪ್ಪಿಸಲು ಈ ಲೋಕ್ ಅದಾಲತ್ ಸಹಾಯವಾಗಲಿದೆ. ರಾಜಿ ಸಂಧಾನದಲ್ಲಿ ಪ್ರಕರಣ ಇತ್ಯರ್ಥವಾದರೆ ನ್ಯಾಯಾಲಯಕ್ಕೆ ತುಂಬಿದ ಶುಲ್ಕವನ್ನು ಸಂಪೂರ್ಣ ಮರುಪಾವತಿ ಮಾಡಲಾಗುವುದು’ ಎಂದು ತಿಳಿಸಿದರು.

‘ಬಳ್ಳಾರಿ ಜಿಲ್ಲೆಯಲ್ಲಿ ಒಟ್ಟು 62,039 ವಿವಿಧ ಚಾಲ್ತಿ ಪ್ರಕರಣಗಳಿದ್ದು, ಅದರಲ್ಲಿ ಈಗಾಗಲೇ ರಾಜೀ ಆಗಬಹುದಾದ 8,058 ಪ್ರಕರಣಗಳನ್ನು ಗುರುತಿಸಲಾಗಿದೆ’ ಎಂದರು.

ADVERTISEMENT

ತೆರಿಗೆ ಪಾವತಿ ಶೇ 5ರಷ್ಟು ವಿನಾಯಿತಿ: ನಗರಸಭೆ ಹಾಗೂ ಜಿಲ್ಲೆಯ ಎಲ್ಲ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಸಾರ್ವಜನಿಕರು ತಮ್ಮ ಪ್ರಸಕ್ತ ಸಾಲಿನ ಆಸ್ತಿ ತೆರಿಗೆಯನ್ನು ಜುಲೈ 31 ರೊಳಗೆ ಪಾವತಿಸುವ ಮೂಲಕ ಶೇ 5 ರಷ್ಟು ವಿನಾಯಿತಿ ಪಡೆಯಬಹುದು ಎಂದು ಹೇಳಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಉಪಸ್ಥಿತರಿದ್ದರು.

ವಿಶೇಷ ಲೋಕ್ ಅದಾಲತ್ 29ರಿಂದ  ‘ವಿಶೇಷ ಲೋಕ್ ಅದಾಲತ್ ಅನ್ನು ಸುಪ್ರೀಂಕೋರ್ಟ್‌ ಜುಲೈ 29 ರಿಂದ ಆಗಸ್ಟ್ 3ರ ವರೆಗೆ ನಡೆಸಲಿದೆ. ಪಕ್ಷಕಾರರಿಗೆ ಎದುರುದಾರರ ಜೊತೆ ಪೂರ್ವಭಾವಿ ಲೋಕ್ ಅದಾಲತ್ ಅನ್ನು ನಡೆಸಲು ವಿಡಿಯೊ ಕಾನ್ಫರೆನ್ಸ್ ವ್ಯವಸ್ಥೆ ಮಾಡಲಾಗಿದೆ. ಜಿಲ್ಲೆಗೆ ಸಂಬಂಧಿಸಿದ ವಿವಿಧ ಪ್ರಕರಣಗಳು ಸರ್ವೋಚ್ಛ ನ್ಯಾಯಾಲಯದಲ್ಲಿಯೂ ಇವೆ. ಇವುಗಳನ್ನು ಸಹ ಲೋಕ್ ಅದಾಲತ್‍ನಲ್ಲಿ ರಾಜಿಗೆ ಪರಿಗಣಿಸಲಾಗಿದೆ’ ಎಂದು ಕೆ.ಜಿ.ಶಾಂತಿ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.