ಕಮಲಾಪುರ (ಹೊಸಪೇಟೆ ತಾಲ್ಲೂಕು): ‘ಸಂಶೋಧನೆಯಲ್ಲಿ ತೊಡಗಿಸಿಕೊಂಡಿರುವ ವಿದ್ಯಾರ್ಥಿಗಳು ಆಳ, ಗಂಭೀರವಾದ ಅಧ್ಯಯನ ಮಾಡಬೇಕು’ ಎಂದು ನಿವೃತ್ತ ಪ್ರಾಧ್ಯಾಪಕ ಪ್ರೊ. ಬಿ.ಸಿ. ಮಹಾಬಲೇಶ್ವರಪ್ಪ ತಿಳಿಸಿದರು.
ಇಲ್ಲಿನ ಹಂಪಿ ಕನ್ನಡ ವಿಶ್ವವಿದ್ಯಾಲಯದ ದೂರಶಿಕ್ಷಣ ನಿರ್ದೇಶನಾಲಯವು ಸೋಮವಾರ ಸ್ನಾತಕೋತ್ತರ ಚರಿತ್ರೆ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಸಂಪರ್ಕ ತರಗತಿಗಳ ವಿಶೇಷ ಉಪನ್ಯಾಸ ನೀಡಿದರು.
‘ಸಂಶೋಧನೆಗಳು ಕೋಣೆಯ ಕೂಸುಗಳಾಗದೇ ಬೀದಿಯ ಕೂಸುಗಳಾಗಬೇಕು. ಆಕರಗಳ ಸಂಗ್ರಹ ಮತ್ತು ವಿಶ್ಲೇಷಣೆ ಕುರಿತು ಸಂಶೋಧಕರು ಸೂಕ್ತ ತಿಳಿವಳಿಕೆ ಹೊಂದಿರಬೇಕು. ಚರಿತ್ರೆಯ ಸಂಶೋಧನೆಯ ವೈಧಾನಿಕತೆಗಳನ್ನು ತಿಳಿದುಕೊಂಡಿಬೇಕು. ಶಿಸ್ತಿನ ಜತೆಗೆ ನೈತಿಕ ಮಟ್ಟ ಕಾಪಾಡಿಕೊಳ್ಳಬೇಕು’ ಎಂದರು.
ಸಮಾಜ ವಿಜ್ಞಾನಗಳ ನಿಕಾಯದ ಡೀನ ಮಂಜುನಾಥ ಬೇವಿನಕಟ್ಟಿ, ಕಾರ್ಯಕ್ರಮದ ಸಂಚಾಲಕ ಮೋಹನಕೃಷ್ಣ ರೈ, ದೂರಶಿಕ್ಷಣ ನಿರ್ದೇಶನಾಲಯದ ನಿರ್ದೇಶಕ ವಾಸುದೇವ ಬಡಿಗೇರ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.