ADVERTISEMENT

ಜುಲೈನಿಂದ ಗ್ರಾ.ಪಂಗಳಲ್ಲೇ ಜನನ, ಮರಣ ನೋಂದಣಿ

​ಪ್ರಜಾವಾಣಿ ವಾರ್ತೆ
Published 30 ಜೂನ್ 2024, 6:25 IST
Last Updated 30 ಜೂನ್ 2024, 6:25 IST

ಬಳ್ಳಾರಿ: ಜನನ ಮತ್ತು ಮರಣ ನೋಂದಣಿ ಪ್ರಕ್ರಿಯೆಯನ್ನು ಜುಲೈನಿಂದ ಗ್ರಾಮ ಪಂಚಾಯಿತಿಯಲ್ಲಿ ಕಾರ್ಯದರ್ಶಿಗಳೇ ಮಾಡಲಿದ್ದಾರೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ತಿಳಿಸಿದ್ದಾರೆ.

ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳನ್ನು ಉಪ ನೋಂದಣಾಧಿಕಾರಿಗಳನ್ನಾಗಿ ನೇಮಿಸುವುದರ ಬದಲಾಗಿ ಗ್ರಾಮ ಪಂಚಾಯತಿ ಕಾರ್ಯದರ್ಶಿಗಳನ್ನೇ ಉಪನೋಂದಣಾಧಿಕಾರಿಯನ್ನಾಗಿ ನೇಮಿಸಿ ತಿದ್ದುಪಡಿ ಮಾಡಲಾಗಿದೆ. ಜನನ, ಮರಣ ಘಟನೆಗಳು ಘಟಿಸಿದ 30 ದಿನಗಳವರೆಗಿನ ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಗ್ರಾಮ ಪಂಚಾಯತಿ ಕಾರ್ಯದರ್ಶಿಗಳನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT