ಬಳ್ಳಾರಿ: ಅತಿಥಿ ಉಪನ್ಯಾಸಕರ ವೇತನ ಹೆಚ್ಚಿಸುವುದು ಮತ್ತು 10 ತರಗತಿಗಳ ಕಾರ್ಯಭಾರಕ್ಕೆ ಅವಕಾಶ ನೀಡುವುದೂ ಸೇರಿದಂತೆ ಹಲವು ಬೇಡಿಕೆಗಳನ್ನು ಚಳಿಗಾಲದ ಅಧಿವೇಶನದಲ್ಲಿ ಪ್ರಸ್ತಾಪಿಸುವಂತೆ ಕೋರಿ ಬಳ್ಳಾರಿ ನಗರ ಶಾಸಕ ಭರತ್ ರೆಡ್ಡಿ ಅವರಿಗೆ ಮನವಿ ಸಲ್ಲಿಸಲಾಗಿದೆ.
ಶಾಸಕರನ್ನು ಶುಕ್ರವಾರ ಭೇಟಿಯಾದ ಅತಿಥಿ ಉಪನ್ಯಾಸಕರ ಸಂಘಟನೆ ಪ್ರಮುಖರು ಮನವಿ ಸಲ್ಲಿಸಿದರು. ಅತಿಥಿ ಶಿಕ್ಷಕರ ಬೇಡಿಕೆಗಳನ್ನು ವಿಧಾನಸಭೆಯಲ್ಲಿ ಪ್ರಸ್ತಾಪ ಮಾಡಲು ಕೋರಲಾಯಿತು.
ಸಂಘಟನೆಯ ಬಳ್ಳಾರಿ ಜಿಲ್ಲಾ ಘಟಕದ ಅಧ್ಯಕ್ಷ ರಂಗಯ್ಯ ಮತ್ತು ಉಪಾಧ್ಯಕ್ಷ ಮಲ್ಲಿಕಾರ್ಜುನ, ಮತ್ತು ಜಿಲ್ಲಾ ಕಾರ್ಯದರ್ಶಿ ನಾಗರತ್ನ ಎಸ್ ಜಿ, ಅತಿಥಿ ಉಪನ್ಯಾಸಕ ತಿಮ್ಮಪ್ಪ ಮತ್ತಿತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.