ಬಳ್ಳಾರಿ: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯ ವಿವಿಧ ಚೆಕ್‍ಪೋಸ್ಟ್‌ಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಯುತ್ತಿದ್ದು, ಸೋಮವಾರದಂದು ಒಟ್ಟು ₹2 ಲಕ್ಷ ನಗದು ಹಣ ಮತ್ತು ₹19,011 ಮೌಲ್ಯದ 44.46 ಲೀಟರ್ ಮದ್ಯ ವಶಪಡಿಕೊಳ್ಳಲಾಗಿದೆ.
ಸಂಡೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತೋರಣಗಲ್ಲಿನ ವಿಜಯನಗರ ವಿಮಾನ ನಿಲ್ದಾಣದ ಹತ್ತಿರ ಚೆಕ್‍ಪೋಸ್ಟ್ ಬಳಿ ಎಸ್‍ಎಸ್‍ಟಿ ತಂಡವು ತಪಾಸಣೆ ವೇಳೆ ದಾಖಲೆಯಿಲ್ಲದೇ ಸಾಗಿಸುತ್ತಿದ್ದ 2 ಲಕ್ಷ ನಗದು ಹಣವನ್ನು ವಶಪಡಿಸಿಕೊಂಡಿದೆ. ಪರಿಶೀಲನೆಗಾಗಿ ಸಮಿತಿಯ ಮುಂದೆ ಹಾಜರುಪಡಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆದ ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಪಾಟಿ ತಿಳಿಸಿದ್ದಾರೆ.
ಅಬಕಾರಿ ಇಲಾಖೆಯಿಂದ ₹18,589 ಮೌಲ್ಯದ 43.38 ಲೀಟರ್ ಮದ್ಯ ಮತ್ತು ಪೊಲೀಸ್ ಇಲಾಖೆಯಿಂದ ₹422 ಬೆಲೆಯ 1.08 ಲೀಟರ್ ಮದ್ಯ ಸೇರಿದಂತೆ ಒಟ್ಟು 44.46 ಲೀಟರ್ (₹19,011 ಮೌಲ್ಯದ) ಮದ್ಯ ವಶಪಡಿಸಿಕೊಳ್ಳಲಾಗಿದೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.