ಬಳ್ಳಾರಿ: ತಾಲೂಕಿನ ಜಾಲಿಬೆಂಚಿ ಗ್ರಾಮದ ನಿವಾಸಿಯೊಬ್ಬರು ಆನ್‌ಲೈನ್‌ನಲ್ಲಿ ₹39.91 ಲಕ್ಷ ಕಳೆದುಕೊಂಡಿದ್ದಾರೆ.
ಫೇಸ್‌ಬುಕ್‌ನಲ್ಲಿ ಷೇರು ಮಾರುಕಟ್ಟೆ ಕುರಿತು ಹುಡುತ್ತಿರುವಾಗ ಯಾರೋ ಅಪರಿಚಿತಯೊಬ್ಬರು ವ್ಯಕ್ತಿಗೆ ಪರಿಚಯವಾಗಿದ್ದರು. ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ, ಶೇ.10ರಷ್ಟು ಲಾಭಾಂಶ ಕೊಡುವುದಾಗಿ ನಂಬಿಸಿ, ಜುಲೈಯಿಂದ ಆಗಸ್ಟ್ ವರೆಗೆ ಹಂತ ಹಂತವಾಗಿ ಒಟ್ಟು ₹39,91,837 ಹಾಕಿಸಿಕೊಂಡು ಅವರು ವಂಚನೆ ಮಾಡಿದ್ದಾರೆ ಎಂದು ವ್ಯಕ್ತಿ ದೂರು ನೀಡಿದ್ದಾರೆ.
ಈ ಕುರಿತು ಬಳ್ಳಾರಿ ಸೈಬರ್ ಕ್ರೈಂ ಪೊಲೀಸ ಠಾಣೆಯಲ್ಲಿ ಮಂಗಳವಾರ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.