ಹೊಸಪೇಟೆ (ವಿಜಯನಗರ): ನ.13ರಂದು ಸಂಡೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ನಡೆಯುವ ಅಂಗವಾಗಿ ನ.11ರ ಸಂಜೆ 6ರಿಂದ ನ.13ರ ಸಂಜೆ 6ರ ವರೆಗೆ ಸಂಡೂರಿಗೆ ಹೊಂದಿಕೊಂಡ ಹೊಸಪೇಟೆ ಮತ್ತು ಕೂಡ್ಲಿಗಿಯ ಗಡಿ ಭಾಗದ 5 ಕಿ.ಮೀ ವ್ಯಾಪ್ತಿಯ ಒಳಗಡೆ ಮದ್ಯ ತಯಾರಿಕೆ, ಸಾಗಾಣಿಕೆ ಹಾಗೂ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಆದೇಶ ಹೊರಡಿಸಿದ್ದಾರೆ.
ಬಾರ್ ಮತ್ತು ರೆಸ್ಟೋರೆಂಟ್, ಕ್ಲಬ್, ಹೋಟೆಲ್, ಡಾಬಾಗಳಲ್ಲಿ ಮತ್ತು ಸಾರ್ವಾಜನಿಕ ಹಾಗೂ ಖಾಸಗಿ ಸ್ಥಳಗಳಲ್ಲಿ ಮದ್ಯ ತಯಾರಿಕೆ, ಸಾಗಾಣಿಕೆ ಹಾಗೂ ಮಾರಾಟ ನಿಷೇಧಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.