ಬಳ್ಳಾರಿ: ಸಂಡೂರು ಉಪ ಚುನಾವಣೆಯಲ್ಲಿ ಅಧರ್ಮ ಗೆದ್ದಿದೆ ಎಂದು ಪರಾಜಿತ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತ ಹೇಳಿದರು.
ಸೋಲು ತಿಳಿಯುತ್ತಲೇ ಮತ ಎಣಿಕೆ ಕೇಂದ್ರದಿಂದ ಹೊರನಡೆದ ಅವರು ಈ ವೇಳೆ ಮಾಧ್ಯಮಗಳ ಜತೆ ಮಾತನಾಡಿದರು 'ಇದು ಧರ್ಮ ಯುದ್ಧ. ಅಧರ್ಮ ಗೆದ್ದಿದೆ. ಸೋಲಿನ ಹೊಣೆ ನಾನೇ ಹೊರುವೆ' ಎಂದರು.
'ಈ ಕ್ಷೇತ್ರ ಗೆಲ್ಲುವ ಭರವಸೆಯನ್ನು ವರಿಷ್ಠರಿಗೆ ನೀಡಿದ್ದೆ. ಗೆಲ್ಲಲು ಸಾಧ್ಯವಾಗದೇ ಇರುವುದಕ್ಕೆ ಎಲ್ಲರ ಕ್ಷಮೆ ಕೇಳುವೆ. ಪಕ್ಷದ ವರಿಷ್ಠರು, ಕಾರ್ಯಕರ್ತರಿಗೆ ಧನ್ಯವಾದ ತಿಳಿಸುವೆ' ಎಂದರು.
'ಮುಸ್ಲಿಂ, ಕುರುಬ ಸಮುದಾಯದ ವೋಟುಗಳು ನಮಗೆ ಬಂದಿಲ್ಲ. ಶಿವರಾಜ ತಂಗಡಗಿ ಉಸ್ತುವಾರಿ ವಹಿಸಿದ್ದ ಭಾಗದಲ್ಲಿ ಹಣದ ಹೊಳೆ ಹರಿದಿದೆ' ಎಂದು ಆರೋಪಿಸಿದರು.
'ಮುಖ್ಯಮಂತ್ರಿ ಮೂರು ದಿನ ಉಳಿದು ಕೆಲಸ ಮಾಡಿದರು. ಹಣ ಖರ್ಚು ಮಾಡಿ ಕಾಂಗ್ರೆಸ್ ಗೆದ್ದಿದೆ. ಗ್ಯಾರೆಂಟಿ ಹಣ ಬಿಡುಗಡೆಯೂ ಚುನಾವಣೆಯಲ್ಲಿ ಕೆಲಸ ಮಾಡಿದೆ' ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.