ಬಳ್ಳಾರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಸಹಯೋಗದಲ್ಲಿ ಮಾರ್ಚ್ 11ರಂದು ಗ್ಯಾರಂಟಿ ಯೋಜನೆಗಳ ಜಿಲ್ಲಾಮಟ್ಟದ ಸಮಾವೇಶ ನಡೆಯಲಿದ್ದು, ಕಾರ್ಯಕ್ರಮಕ್ಕೆ ವೇದಿಕೆ ಸಜ್ಜುಗೊಂಡಿದೆ.
ಬೆಳಿಗ್ಗೆ 11 ಗಂಟೆಗೆ ನಗರದ ಮೋಕಾ ರಸ್ತೆಯ ಸುವರ್ಣ ಇಂಟರ್ ನ್ಯಾಷನಲ್ ಸ್ಕೂಲ್ ಮೈದಾನದಲ್ಲಿ ಗ್ಯಾರಂಟಿ ಯೋಜನೆಗಳ ಸಮಾವೇಶ ನಡೆಯಲಿದೆ. ಕಾರ್ಯಕ್ರಮಕ್ಕೆ ಫಲಾನುಭವಿಗಳು, ಸಾರ್ವಜನಿಕರು ಪಾಲ್ಗೊಳ್ಳಲು ಅಗತ್ಯ ಬಸ್ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ಊಟದ ವ್ಯವಸ್ಥೆಯನ್ನು ಜಿಲ್ಲಾಡಳಿತ ಮಾಡಿದೆ.
ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಪಾರ್ಕಿಂಗ್ ವ್ಯವಸ್ಥೆಯನ್ನು ಜಿಲ್ಲಾ ಪೊಲೀಸ್ ಇಲಾಖೆ ಮಾಡಿದೆ.
ಗ್ಯಾರಂಟಿ ಯೋಜನೆಗಳ ಜಿಲ್ಲಾಮಟ್ಟದ ಸಮಾವೇಶದಲ್ಲಿ ಫಲಾನುಭವಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಕೋರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.