ADVERTISEMENT

ಬಳ್ಳಾರಿ | ಎಸ್ಸೆಸ್ಸೆಲ್ಸಿ: ಗಣಿತಕ್ಕೆ 372 ಗೈರು

​ಪ್ರಜಾವಾಣಿ ವಾರ್ತೆ
Published 2 ಏಪ್ರಿಲ್ 2024, 16:12 IST
Last Updated 2 ಏಪ್ರಿಲ್ 2024, 16:12 IST

ಬಳ್ಳಾರಿ: ಜಿಲ್ಲೆಯಾದ್ಯಂತ ನಾಲ್ಕನೇ ದಿನದ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಯು ಸುಗಮವಾಗಿ ನಡೆಯಿತು. ಮಂಗಳವಾರ ನಡೆದ ಗಣಿತ ವಿಷಯ ಪರೀಕ್ಷೆಗೆ ಒಟ್ಟು 20,989 ವಿದ್ಯಾರ್ಥಿಗಳು ಹಾಜರಾಗಿದ್ದು, 372 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.

ಗಣಿತ ವಿಷಯ ಪರೀಕ್ಷೆಗೆ ಜಿಲ್ಲೆಯಲ್ಲಿ ಹೊಸದಾಗಿ 20,678 ವಿದ್ಯಾರ್ಥಿಗಳು, 683 ಪುನರಾವರ್ತಿತ ವಿದ್ಯಾರ್ಥಿಗಳು ಸೇರಿ ಒಟ್ಟು 21,361 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು.

ಬಳ್ಳಾರಿ ಪೂರ್ವ ವಲಯ 134, ಸಂಡೂರು 53, ಸಿರುಗುಪ್ಪ 64, ಬಳ್ಳಾರಿ ಪಶ್ಚಿಮ ವಲಯ 121 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 372 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಉಮಾದೇವಿ ಅವರು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.