ADVERTISEMENT

ಸಿರುಗುಪ್ಪ: ತಹಶೀಲ್ದಾರ್ ಪತ್ನಿ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 24 ಡಿಸೆಂಬರ್ 2020, 5:13 IST
Last Updated 24 ಡಿಸೆಂಬರ್ 2020, 5:13 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಸಿರುಗುಪ್ಪ: ಇಲ್ಲಿನ ತಹಶೀಲ್ದಾರ್ ಎಸ್.ಬಿ.ಕೂಡಲಗಿ ಅವರ ಪತ್ನಿ ಶಂಕ್ರಮ್ಮ (50) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.

ಸರ್ಕಾರಿ ವಸತಿ ಗೃಹದಲ್ಲೇ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೂಡಲಗಿ ಅವರನ್ನು ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿಗೆ ನಿಯೋಜಿಸಲಾಗಿತ್ತು.

ಶಾಸಕ ಎಂಎಸ್.ಸೋಮಲಿಂಗಪ್ಪ ಭೇಟಿ ನೀಡಿ ಸಾಂತ್ವನ ಹೇಳಿದರು. ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.