ತೆಕ್ಕಲಕೋಟೆ: ಕೇಂದ್ರ ಸರ್ಕಾರವು ಬಜೆಟ್‌ನಲ್ಲಿ ಐಸಿಡಿಎಸ್ ಯೋಜನೆಯಲ್ಲಿ ₹300 ಕೋಟಿ ಅನುದಾನ ಕಡಿತಗೊಳಿಸಿದ್ದು, ಇದು ಗರ್ಭಿಣಿಯರಿಗೆ, ಬಾಣಂತಿಯರಿಗೆ ಹಾಗೂ ಮಕ್ಕಳಿಗೆ ಮಾಡಿದ ಅನ್ಯಾಯ ಎಂದು ಆರೋಪಿಸಿ ಸಿರುಗುಪ್ಪ ತಾಲ್ಲೂಕು ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಬಿ.ಉಮಾದೇವಿ ಆಕ್ರೋಶ ವ್ಯಕ್ತಪಡಿಸಿದರು.
ಪಟ್ಟಣದ ನಾಡಕಚೇರಿ ಮುಂಭಾಗದಲ್ಲಿ ಕೇಂದ್ರ ಸರ್ಕಾರದ ಬಜೆಟ್ ನೀತಿ ವಿರೋಧಿಸಿ ಸೋಮವಾರ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು.
‘ಕೇಂದ್ರ ಸರ್ಕಾರವು ಅನುದಾನ ಕಡಿತಗೊಳಿಸಿದ್ದರಿಂದ 2 ಕೋಟಿ ತಾಯಂದಿರು ಹಾಗೂ 8 ಕೋಟಿ ಮಕ್ಕಳ ಆರೋಗ್ಯ, ಆಹಾರ ಮತ್ತು ಶಿಕ್ಷಣದ ಹಕ್ಕನ್ನು ಕಸಿದು ಕೊಂಡಂತೆ ಆಗಿದೆ’ ಎಂದು ಆತಂಕ ವ್ಯಕ್ತಪಡಿಸಿದರು.
ತೆಕ್ಕಲಕೋಟೆ ಹೋಬಳಿ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆಯರು ಮಾನವ ಸರಪಳಿ ರಚಿಸಿ, ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.
ತಾಲ್ಲೂಕು ಆಂಗನವಾಡಿ ನೌಕರರ ಸಂಘದ ಕಾರ್ಯದರ್ಶಿ ಶಕುಂತಲ, ಖಜಾಂಚಿ ಎಂ.ಖಾಜಾಬಿ, ಪದಾಧಿಕಾರಿಗಳಾದ ಕೆ.ನೀಲಾವತಿ, ಜೆ. ಈರಮ್ಮ, ಎಸ್.ಎಂ.ಚಂದ್ರಕಲಾ, ವಿ. ಪಾರ್ವತಿ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.