ಹೊಸಪೇಟೆ: ನಗರದ ಸ್ಟೇಶನ್ ರಸ್ತೆಯಲ್ಲಿ ಬುಧವಾರ ವಿಜಯನಗರ ಕ್ಷೇತ್ರದ ಬಿಜೆಪಿ ಕಚೇರಿ ಆರಂಭಿಸಲಾಯಿತು.
ಪಕ್ಷದ ಜಿಲ್ಲಾ ಅಧ್ಯಕ್ಷ ಚನ್ನಬಸವನಗೌಡ ಪಾಟೀಲ ಉದ್ಘಾಟಿಸಿ, ‘ವಿಜಯನಗರ ಕ್ಷೇತ್ರದಲ್ಲಿ ಬಿಜೆಪಿ ಕಚೇರಿ ಆರಂಭಿಸುತ್ತಿರುವುದು ಸಂತಸದ ಸಂಗತಿ. ಇದರಿಂದ ಪಕ್ಷದ ಸಂಘಟನೆಗೆ ಅನುಕೂಲವಾಗಲಿದೆ’ ಎಂದು ಹೇಳಿದರು. ‘ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ 70 ಸಾವಿರಕ್ಕೂ ಅಧಿಕ ಮತಗಳನ್ನು ಪಡೆದಿದ್ದಾರೆ. ಕ್ಷೇತ್ರದ ಜನರಿಗೆ ಬಿಜೆಪಿ ಪರ ಒಲವು ಇರುವುದು ಇದರಿಂದ ಗೊತ್ತಾಗುತ್ತದೆ. ಪಕ್ಷದ ಚಟುವಟಿಕೆಗಳು ವಿಸ್ತಾರಗೊಂಡರೆ ಪಕ್ಷವನ್ನು ಇನ್ನಷ್ಟು ಸಂಘಟಿಸಬಹುದು’ ಎಂದರು.
‘ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು ಮೂರು ಸ್ಥಾನಗಳಲ್ಲಿ ಗೆದ್ದಿದೆ. ಉಳಿದ ಕಡೆ ಬಹಳ ಕಡಿಮೆ ಮತಗಳ ಅಂತರದಿಂದ ಪಕ್ಷದ ಅಭ್ಯರ್ಥಿಗಳು ಸೋತಿದ್ದಾರೆ. ಅಲ್ಲಿ ನಾವು ಪಕ್ಷವನ್ನು ಉತ್ತಮವಾಗಿ ಸಂಘಟಿಸಿದರೆ ಲೋಕಸಭೆ ಚುನಾವಣೆಯಲ್ಲಿ ಸುಲಭವಾಗಿ ಗೆಲ್ಲಬಹುದು’ ಎಂದು ತಿಳಿಸಿದರು.
ಮಂಡಲ ಅಧ್ಯಕ್ಷ ಅನಂತ ಪದ್ಮನಾಭ, ನಗರಸಭೆ ಸದಸ್ಯರಾದ ಚಂದ್ರಕಾಂತ ಕಾಮತ್, ಗಿಂಜಿ ಮಂಜುನಾಥ, ರಾಮಚಂದ್ರಗೌಡ, ಪಕ್ಷದ ಎಸ್ಟಿ ಮೋರ್ಚಾ ಜಿಲ್ಲಾ ಅಧ್ಯಕ್ಷ ಗುದ್ಲಿ ಪರಶುರಾಮ, ಮುಖಂಡರಾದ ಬಸವರಾಜ ನಾಲತ್ವಾಡ, ಬಸವರಾಜ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.