ಹೊಸಪೇಟೆ (ವಿಜಯನಗರ): ಜಿಲ್ಲಾ ಸ್ವೀಪ್ ಸಮಿತಿಯು ಜಿಲ್ಲೆಯ ವಿವಿಧ ಕಡೆ ನಡೆಯುತ್ತಿರುವ ನರೇಗಾ ಕಾಮಗಾರಿ ಸ್ಥಳದಲ್ಲಿ ಶನಿವಾರ ಮತದಾನ ಜಾಗೃತಿ ನಡೆಸಿತು.
ಕೆರೆ ಅಂಗಳದಲ್ಲಿ ಮತದಾನದ ಮಹತ್ವ ತಿಳಿಸಿದ ಅಧಿಕಾರಿಗಳು, ಪ್ರತಿಜ್ಞಾ ವಿಧಿ ಬೋಧಿಸಿದರು. ಹರಪನಹಳ್ಳಿ ತಾಲ್ಲೂಕಿನ ಮಾಡ್ಲಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಡ್ಡಿನ ದಾದಪುರ ಗ್ರಾಮದ ಕೆರೆ ಅಂಗಳದಲ್ಲಿ ತಾಲ್ಲೂಕು ರೇಗಾ ಸಹಾಯಕ ನಿರ್ದೇಶಕ ಚಂದ್ರನಾಯ್ಕ ಎಲ್. ಮಾತನಾಡಿ, ಮತದಾನ ಎನ್ನುವುದು ಮುಂದಿನ ಐದು ವರ್ಷಗಳಿಗೆ ಸದೃಢ ಪ್ರಜಾಪ್ರಭುತ್ವ ನಿರ್ಮಿಸುವುದಾಗಿದೆ. ಹಾಗಾಗಿ ನರೇಗಾ ಕೂಲಿಕಾರರು ಕಡ್ಡಾಯವಾಗಿ ಮತದಾನ ಮಾಡಬೇಕೆಂದು ತಿಳಿಸಿದರು.
ಮತದಾರರ ಪಟ್ಟಿಯಲ್ಲಿ ಹೆಸರು ಇದ್ದವರು ನರೇಗಾ ಗುರುತಿನ ಚೀಟಿ ತೋರಿಸಿ ಹಕ್ಕು ಚಲಾಯಿಸಬಹುದಾಗಿದೆ ಎಂದು ಹೇಳಿದರು.
ತಾಂತ್ರಿಕ ಸಂಯೋಜಕ ನಾಗರಾಜ ನಾಯ್ಕ, ತಾಲ್ಲೂಕು ಐಇಸಿ ಸಂಯೋಜಕ ಕೆ.ವಸಿಗೇರಪ್ಪ ಚಾಗನೂರು, ತಾಲ್ಲೂಕು ಎಂಆರ್‌ಡಬ್ಲ್ಯು ಧನರಾಜ, ತಾಂತ್ರಿಕ ಸಹಾಯಕ ಎಂಜಿನಿಯರ್ ಮಲ್ಲಿಕಾರ್ಜುನ್ ಪೂಜಾರ್, ಬಿಎಫ್‌ಟಿ ಕೊಟ್ರೇಶ್ ಬಂಡ್ರಿ ಹಾಜರಿದ್ದರು. ಹೂವಿನಹಡಗಲಿಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಬಿ. ಸದಾಶಿವ ಪ್ರಭು ನರೇಗಾ ಕಾಮಗಾರಿ ಸ್ಥಳದಲ್ಲಿ ಜಾಗೃತಿ ಮೂಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.