ಬಳ್ಳಾರಿ: ನಗರದ ಗಾಂಧಿನಗರದ ನಿವಾಸಿ, ಅಮೃತ ಡಯಾಗ್ನೋಸ್ಟಿಕ್ ಕೇಂದ್ರದ ಉದ್ಯೋಗಿ ಪುಷ್ಪಾವತಿ (58) ಅವರನ್ನು ಅವರ ಮನೆಯಲ್ಲೇ ಚೂರಿಯಿಂದ ಕತ್ತು ಸೀಳಿ ಕೊಲೆ ಮಾಡಲಾಗಿದೆ.
ವಿಧವೆಯಾಗಿದ್ದ ಅವರು ಒಂಟಿಯಾಗಿ ವಾಸಿಸುತ್ತಿದ್ದರು. ಅವರ ಮಗಳು ಹೈದರಾಬಾದ್ ನ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದಾರೆ.
ಗುರುವಾರ ರಾತ್ರಿಯಿಂದ ಶುಕ್ರವಾರ ಬೆಳಿಗಿನ ಜಾವದ ನಡುವೆ ಕೊಲೆಯಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ.ಸ್ಥಳಕ್ಕೆ ಎಸ್ಪಿ ಲಕ್ಷ್ಮಣ ಬ.ನಿಂಬರಗಿ ಭೇಟಿ ನೀಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.