ADVERTISEMENT

ಯುವನಿಧಿ: ಪ್ರತಿ ತಿಂಗಳು ಸ್ವಯಂ ಘೋಷಣೆ ಕಡ್ಡಾಯ

​ಪ್ರಜಾವಾಣಿ ವಾರ್ತೆ
Published 28 ಫೆಬ್ರುವರಿ 2024, 4:15 IST
Last Updated 28 ಫೆಬ್ರುವರಿ 2024, 4:15 IST

ಬಳ್ಳಾರಿ: ಯುವನಿಧಿಗೆ ನೋಂದಾಯಿಸಿಕೊಂಡಿರುವ ಫಲಾನುಭವಿಗಳು ತಾವು ವ್ಯಾಸಂಗ ಮಾಡುತ್ತಿಲ್ಲ, ಸ್ವಯಂ ಉದ್ಯೋಗಿಯಲ್ಲ, ನಿರುದ್ಯೋಗಿ ಎಂದು ಪ್ರತಿ ತಿಂಗಳು ಸ್ವಯಂ ಘೋಷಣೆ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಸಲ್ಲಿಸಬೇಕು ಎಂದು ಜಿಲ್ಲಾ ಕೌಶಲ ಅಭಿವೃದ್ಧಿ ಅಧಿಕಾರಿ ಪಿ.ಎಸ್.ಹಟ್ಟಪ್ಪ ತಿಳಿಸಿದ್ದಾರೆ.

 ಫೆ.29ರೊಳಗಾಗಿ ಸೇವಾ ಸಿಂಧು ಪೋರ್ಟಲ್ ಮೂಲಕ ಸ್ವಯಂ ಘೋಷಣೆ ಪತ್ರ ಸಲ್ಲಿಸಲು ಕಾಲಾವಕಾಶವಿದೆ.ಫೆಬ್ರುವರಿ ತಿಂಗಳ ಪ್ರಯೋಜನ ಪಡೆದುಕೊಳ್ಳಲು ಸ್ಚಯಂ ಘೋಷಣೆ ಮಾಡಬೇಕಾಗಿದೆ.
ಫಲಾನುಭವಿಗಳಿಗೆ ಎಸ್‍ಎಂಎಸ್ ಮೂಲಕ ಸಂದೇಶ ರವಾನಿಸಲಾಗುತ್ತದೆ. ಅಭ್ಯರ್ಥಿಗಳು ಕಡ್ಡಾಯವಾಗಿ ಆಧಾರ್ ಸೀಡೆಡ್ ಬ್ಯಾಂಕ್ ಖಾತೆ ಹೊಂದಿರಬೇಕು. ಫಲಾನುಭವಿಗಳು ಯುವ ನಿಧಿ ಯೋಜನೆಯ ಸ್ವಯಂ ಘೋಷಣೆ ಮಾಡಿಕೊಳ್ಳಲು https://sevasindhugs. karnataka.gov.in/ ವೆಬ್‍ಸೈಟ್‍ಗೆ ಭೇಟಿ ನೀಡಬಹುದು.

ಹೆಚ್ಚಿನ ಮಾಹಿತಿಗೆ ಮೊ.8861866725, 9964502514ಗೆ ಸಂಪರ್ಕಿಸಬಹುದು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.