ADVERTISEMENT

ಗಾಯಾಳು ಆರೋಗ್ಯ ವಿಚಾರಿಸಿದ ಜಿ.ಪಂ. ಅಧ್ಯಕ್ಷೆ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2018, 14:19 IST
Last Updated 22 ಸೆಪ್ಟೆಂಬರ್ 2018, 14:19 IST
ಹೊಸಪೇಟೆಯ ನೂರು ಹಾಸಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಹಿಳೆಯ ಗಾಯವನ್ನು ನೋಡುತ್ತಿರುವ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಭಾರತಿ ತಿಮ್ಮಾರೆಡ್ಡಿ–ಪ್ರಜಾವಾಣಿ ಚಿತ್ರ
ಹೊಸಪೇಟೆಯ ನೂರು ಹಾಸಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಹಿಳೆಯ ಗಾಯವನ್ನು ನೋಡುತ್ತಿರುವ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಭಾರತಿ ತಿಮ್ಮಾರೆಡ್ಡಿ–ಪ್ರಜಾವಾಣಿ ಚಿತ್ರ   

ಹೊಸಪೇಟೆ: ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಭಾರತಿ ತಿಮ್ಮಾರೆಡ್ಡಿ ಅವರು ಶನಿವಾರ ಸಂಜೆ ಇಲ್ಲಿನ ನೂರು ಹಾಸಿಗೆ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ, ಶುಕ್ರವಾರ ಚಿತ್ತವಾಡ್ಗಿಯಲ್ಲಿ ಪೀರಲ ಮೆರವಣಿಗೆ ವೇಳೆ ಕಟ್ಟಡದ ಸಜ್ಜ ಕುಸಿದು ಗಾಯಗೊಂಡವರ ಯೋಗಕ್ಷೇಮ ವಿಚಾರಿಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ‘ಘಟನೆಯಲ್ಲಿ ಮೃತಪಟ್ಟ ಬಾಲಕಿಗೆ ಹಾಗೂ ಗಾಯಾಳುಗಳಿಗೆ ಪರಿಹಾರ ನೀಡಲಾಗುವುದು. ಇಷ್ಟರಲ್ಲೇ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯೊಂದಿಗೆ ಚರ್ಚಿಸಿ, ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.

‘ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರು ಹಾಗೂ ರೋಗಿಗಳಿಗೆ ಹಾಸಿಗೆಗಳ ಸಮಸ್ಯೆ ಇದೆ. ಅದನ್ನು ಆದಷ್ಟು ಶೀಘ್ರ ಬಗೆಹರಿಸಲಾಗುವುದು. ಖಾಸಗಿ ಆಸ್ಪತ್ರೆಯಲ್ಲಿ ದಾಖಲಾದ ಗಾಯಾಳುಗಳಿಗೆ ಆರೋಗ್ಯ ಕರ್ನಾಟಕ ಯೋಜನೆಯ ಅಡಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ’ ಎಂದು ಸ್ಪಷ್ಟಪಡಿಸಿದರು.

ADVERTISEMENT

ಜಿಲ್ಲಾ ಆರೋಗ್ಯ ಅಧಿಕಾರಿ ಶಿವರಾಮ್ ಹೆಡೆ, ತಾಲ್ಲೂಕು ಪ್ರಭಾರ ವೈದ್ಯಾಧಿಕಾರಿ ಪವನ್ ಕುಮಾರ, ಶಸ್ತ್ರಚಿಕಿತ್ಸಕಿ ಡಾ.ಭಾಗೀರಥಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಟಿ. ವೆಂಕೋಬಪ್ಪ, ಡಾ. ಸಲೀಂ, ಫಿಜಿಶಿಯನ್‌ ಸೋಮಶೇಖರ್‌ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.